ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಗೆ ₹ 42.33 ಲಕ್ಷ ಹಾನಿ

Last Updated 18 ಮೇ 2022, 16:09 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲೆಯಲ್ಲಿ ಮಂಗಳವಾರ 9.1 ಮಿ.ಮೀ ಸರಾಸರಿ ಮಳೆಯಾಗಿದ್ದು, ಒಟ್ಟು ₹ 42.33 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ಚನ್ನಗಿರಿ ತಾಲ್ಲೂಕಿನಲ್ಲಿ 15.2 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ 6.5 ಮಿ.ಮೀ, ಹರಿಹರದಲ್ಲಿ 7.1 ಮಿ.ಮೀ, ಹೊನ್ನಾಳಿಯಲ್ಲಿ 8.3 ಮಿ.ಮೀ, ಜಗಳೂರಿನಲ್ಲಿ 5.9 ಮಿ.ಮೀ ಹಾಗೂ ನ್ಯಾಮತಿ ತಾಲ್ಲೂಕಿನಲ್ಲಿ 7.6 ಮಿ.ಮೀ ಮಳೆಯಾಗಿದೆ.

ದಾವಣಗೆರೆ ತಾಲ್ಲೂಕಿನಲ್ಲಿ 30 ಗುಂಟೆ ಅಡಿಕೆ ಬೆಳೆ ಮತ್ತು 10 ಗುಂಟೆ ತೆಂಗಿನ ಬೆಳೆ ಹಾನಿಯಾಗಿದ್ದು, ₹ 70 ಲಕ್ಷ ನಷ್ಟ ಸಂಭವಿಸಿದೆ.

ಹರಿಹರ ತಾಲ್ಲೂಕಿನಲ್ಲಿ 5 ಪಕ್ಕಾ ಮನೆ ಭಾಗಶಃ ಹಾಗೂ ಒಂದು ಕಚ್ಚಾ ಮನೆ ಭಾಗಶಃ ಹಾನಿಯಾಗಿದೆ. 16 ಮನೆಗಳ ಚಾವಣಿಯ ಸಿಮೆಂಟ್‌ ಶೀಟ್‌, ಹೆಂಚು ಹಾನಿಯಾಗಿದೆ. 329 ಎಕರೆ ಭತ್ತದ ಬೆಳೆ, 5 ಎಕರೆ ಬಾಳೆ ಬೆಳೆ ಹಾಗೂ 8 ಎಕರೆ ಅಡಿಕೆ ಮತ್ತು ತೆಂಗು ಬೆಳೆ ಸೇರಿ ಒಟ್ಟು ₹ 26.13 ಲಕ್ಷ ಮೌಲ್ಯದ ಬೆಳೆ ಹಾನಿಯಾಗಿದೆ.

ಹೊನ್ನಾಳಿ ತಾಲ್ಲೂಕಿನಲ್ಲಿ ತಲಾ ಒಂದು ಪಕ್ಕಾ ಹಾಗೂ ಕಚ್ಚಾ ಮನೆಗೆ ಭಾಗಶಃ ಹಾನಿಯಾಗಿದೆ. 3 ಎಕರೆ ಬಾಳೆ ಬೆಳೆ ಹಾನಿಯಾಗಿದೆ.

ನ್ಯಾಮತಿ ತಾಲ್ಲೂಕಿನಲ್ಲಿ 4 ಪಕ್ಕಾ ಮನೆಗೆ ಹಾನಿಯಾಗಿದೆ. ಚನ್ನಗಿರಿ ತಾಲ್ಲೂಕಿನಲ್ಲಿ ತಲಾ ಒಂದು ಪಕ್ಕಾ ಹಾಗೂ ಕಚ್ಚಾ ಮನೆಗಳು ಭಾಗಶಃ ಹಾಗೂ ಒಂದು ದನದ ಕೊಟ್ಟಿಗೆಗೆ ಹಾನಿಯಾಗಿದೆ. 20 ಎಕರೆ ಭತ್ತದ ಬೆಳೆ ನಷ್ಟವಾಗಿದೆ.

ಸರ್ಕಾರದ ಮಾರ್ಗಸೂಚಿ ಪ್ರಕಾರ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

*

ದಿನವಿಡೀ ಜಿಟಿ ಜಿಟಿ ಮಳೆ

ದಾವಣಗೆರೆ ನಗರದಲ್ಲಿ ಬುಧವಾರ ದಿನವಿಡೀ ಜಿಟಿ ಜಿಟಿ ಮಳೆಯಾಗಿದೆ. ಮುಂಜಾನೆಯಿಂದಲೂ ಸಣ್ಣಗೆ ಸುರಿಯತೊಡಗಿದ ಮಳೆ ಆಗಾಗ ಬಿಡುವು ನೀಡುತ್ತಿತ್ತು. ದಿನವಿಡೀ ಮೋಡ ಕವಿದ ವಾತಾವರಣವಿತ್ತು.

ಜಿಟಿ ಜಿಟಿ ಮಳೆ ಸುರಿದಿದ್ದರಿಂದ ಗುಂಡಿ ಬಿದ್ದಿದ್ದ ರಸ್ತೆಗಳು ಕೆಸರುಗದ್ದೆಯಂತಾಗಿದ್ದವು. ಮಳೆಯಾಗುತ್ತಿರುವುದರಿಂದ ಮಾರುಕಟ್ಟೆಗೆ ಹೆಚ್ಚಿನ ಜನ ಬಾರದಿರುವುದರಿಂದ ಬೀದಿ ಬದಿಯ ವ್ಯಾಪಾರಿಗಳು ಗ್ರಾಹಕರಿಲ್ಲದೇ ನಷ್ಟವನ್ನು ಅನುಭವಿಸುವಂತಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT