ಚನ್ನಗಿರಿ: ‘ಹಿಂದೂ ಸಾಮ್ರಾಜ್ಯ ಸಂಸ್ಥಾಪಕ ಶಿವಾಜಿ ಮಹಾರಾಜರ ತಂದೆ ಷಹಾಜೀ ರಾಜೇ ಭೋಂಸ್ಲೆ ಅವರ ಸಮಾಧಿ ಸ್ಥಳ ಇರುವ ತಾಲ್ಲೂಕಿನ ಹೊದಿಗೆರೆ ಗ್ರಾಮದ ಹಾಗೂ ಸಮಾಧಿ ಸ್ಥಳದ ಅಭಿವೃದ್ಧಿಗೆ ರಾಜ್ಯ ಬಜೆಟ್ನಲ್ಲಿ ₹ 5 ಕೋಟಿ ಅನುದಾನ ಮೀಸಲಿರಿಸಲಾಗಿದೆ.

ಷಹಾಜೀ ರಾಜೇ ಭೋಂಸ್ಲೆ ಅವರು 1664ರಲ್ಲಿ ಹೊದಿಗೆರೆ ಗ್ರಾಮದ ಬಳಿಯ ಕಾಡಿನಲ್ಲಿ ಬೇಟೆಯಾಡುವ ಸಂದರ್ಭ ಕುದುರೆಯ ಮೇಲಿಂದ ಬಿದ್ದು ಸಾವನ್ನಪ್ಪಿದ್ದರು. ಅವರ ಅಂತ್ಯಕ್ರಿಯೆಯನ್ನು ಈ ಗ್ರಾಮದ ಬಳಿ ನೆರವೇರಿಸಿ ಸಮಾಧಿ ನಿರ್ಮಿಸಲಾಗಿತ್ತು. ಈ ಸ್ಥಳವು ಕೇಂದ್ರ ಪುರಾತತ್ವ ಇಲಾಖೆ ವ್ಯಾಪ್ತಿಗೆ ಸೇರಿದೆ.

ಪುರಾತತ್ವ ಇಲಾಖೆ ಸಮಾಧಿ ಸ್ಥಳ ಇರುವ ಜಾಗಕ್ಕೆ ಕಾಪೌಂಡ್ ನಿರ್ಮಿಸಿ, ಕೆಲವೊಂದು ಸಣ್ಣಪುಟ್ಟ ಅಭಿವೃದ್ಧಿ ಕಾರ್ಯಗಳನ್ನು ಮಾತ್ರ ಮಾಡಿತ್ತಾದರೂ ಸಮಗ್ರ ಅಭಿವೃದ್ಧಿ ಕಾಣದೇ ನಿರ್ಲಕ್ಷ್ಯಕ್ಕೆ ಒಳಗಾಗಿದೆ. 2008ರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನವಿ ಮೇರೆಗೆ ₹ 1 ಕೋಟಿ
ಅನುದಾನ ನೀಡಿದ್ದರು. ಈ ಅನುದಾನದಲ್ಲಿ ಬೃಹತ್ ಪ್ರಮಾಣದ ಸಮುದಾಯ ಭವನ ನಿರ್ಮಿಸಲು ಮರಾಠಾ ಗೋಸಾಯಿ ಪೀಠದ ಭಾರತಿನಂದ ಸ್ವಾಮೀಜಿ ಮುಂದಾಗಿದ್ದರು. ಆದರೆ, ಭವನದ ನಿರ್ಮಾಣಕ್ಕೆ ಅನುದಾನದ ಕೊರತೆಯಿಂದಾಗಿ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದೆ. ಸ್ವಾಮೀಜಿ ನಿಧನ ನಂತರ ಈ ಸಮಾಧಿ ಸ್ಥಳ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು, ಅಭಿವೃದ್ಧಿಯ ಕನಸು ಕನಸಾಗಿಯೇ ಉಳಿದಿದೆ.

ಕ್ಷತ್ರಿಯ ಮರಾಠಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮೂಳೆ ಹಾಗೂ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಮಾಧಿ ಸ್ಥಳದ ಅಭಿವೃದ್ಧಿಗೆ ಅನುದಾನ ನೀಡುವಂತೆ ಒತ್ತಾಯಿಸಿದ್ದರು.

ಮುಖ್ಯಮಂತ್ರಿಯವರು ಸಮಾಧಿ ಸ್ಥಳದ ಅಭಿವೃದ್ಧಿಗೆ ₹ 5 ಕೋಟಿ ಅನುದಾನ ಘೋಷಿಸಿರುವುದು ಸರ್ಕಾರವು ಮರಾಠಾ ಸಮುದಾಯಕ್ಕೆ ನೀಡಿದ ಕೊಡುಗೆಯಾಗಿದೆ ಎಂದು ಮಾಡಾಳ್ ವಿರೂಪಾಕ್ಷಪ್ಪ ಸಂತಸ ವ್ಯಕ್ತಪಡಿಸಿದ್ದಾರೆ. ತಾಲ್ಲೂಕು ಮರಾಠಾ ಸಮಾಜದ ಮುಖಂಡ ಕುಬೇಂದ್ರೋಜಿ ರಾವ್ ಸರ್ಕಾರವನ್ನು
ಅಭಿನಂದಿಸಿದ್ದಾರೆ.

ಷಹಜಿ ಮಹಾರಾಜರ ಸಮಾಧಿ ಅಭಿವೃದ್ಧಿಗೆ ₹ 5 ಕೋಟಿ ಅನುದಾನ ನೀಡಿದ್ದು, ಸಮಾಜದವರ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಈಡೇರಿಸಿರುವುದು ಅಭಿನಂದನೀಯ

-ಯಶವಂತ ರಾವ್ ಜಾಧವ್, ಗೌರವಾಧ್ಯಕ್ಷ, ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.