ಚನ್ನಗಿರಿ: ತಾಲ್ಲೂಕಿನ ಅರಣ್ಯ ಹಾಗೂ ಕಂದಾಯ ಇಲಾಖೆಗೆ ಸೇರಿದ ಪ್ರದೇಶಗಳಲ್ಲಿ ಬಗರ್‌ಹುಕುಂ ಸಾಗುವಳಿ ಮಾಡಿಕೊಂಡ ಸಾಗುವಳಿದಾರರಿಗೆ ಹಂತ ಹಂತವಾಗಿ ಹಕ್ಕುಪತ್ರಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ. ಸದ್ಯ 73 ಸಾಗುವಳಿದಾರರಿಗೆ ಸಾಗುವಳಿ ಹಕ್ಕುಪತ್ರ ನೀಡಲು ತೀರ್ಮಾನಿಸಲಾಗಿದೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ ಬಗರ್‌ಹುಕುಂ ಸಮಿತಿ ಸಭೆಯಲ್ಲಿ ಮಾತನಾಡಿದರು.
ಅರ್ಜಿ ನಮೂನೆ 53ರ ಅಡಿಯಲ್ಲಿ ಅರಣ್ಯ ಪ್ರದೇಶ ಹಾಗೂ ಕಂದಾಯ ಇಲಾಖೆಗೆ ಸೇರಿದ ಜಮೀನುಗಳಲ್ಲಿ ಸಾಗುವಳಿ ಮಾಡಿಕೊಂಡಿರುವ 544 ಸಾಗುವಳಿದಾರರು ಅರ್ಜಿ ಸಲ್ಲಿಸಿದ್ದಾರೆ. ಇದರಲ್ಲಿ ಸಮಿತಿ 471 ಅರ್ಜಿಗಳಿಗೆ ಕಂದಾಯ ಹಾಗೂ ಅರಣ್ಯ ಇಲಾಖೆ ಅಭಿಪ್ರಾಯ ಪಡೆಯಲು ಕಳುಹಿಸಲಾಗಿದೆ. 73 ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಸಭೆ ಸಮ್ಮತಿ ನೀಡಿದೆ ಎಂದರು.
ಹೊಸದಾಗಿ ಅರಣ್ಯ ಮತ್ತು ಕಂದಾಯ ಇಲಾಖೆಗೆ ಸೇರಿದ ಪ್ರದೇಶಗಳಲ್ಲಿ ಅಕ್ರಮವಾಗಿ ಸಾಗುವಳಿ ಮಾಡಿದರೆ ಸಹಿಸುವುದಿಲ್ಲ. ಹೊಸದಾಗಿ ಸಾಗುವಳಿ ಮಾಡಲು ಮುಂದಾದರೆ ಕೇಸು ದಾಖಲು ಮಾಡಲಾಗುತ್ತದೆ ಎಂದು ಎಚ್ಚರಿಸಿದರು. ತಹಶೀಲ್ದಾರ್ ಡಾ.ಪಟ್ಟರಾಜಗೌಡ, ಬಗರ್‌ಹುಕುಂ ಸಮಿತಿ ಸದಸ್ಯರಾದ ರಾಜೇಶ್ ನೆಲ್ಲಿ ಹಂಕಲು, ಉಮಾದೇವಿ, ಮಾವಿನಕಟ್ಟೆ ವಲಯ ಅರಣ್ಯಾಧಿಕಾರಿ ಮಾವಿನಹೊಳಿಯಪ್ಪ, ಚನ್ನಗಿರಿ ಅರಣ್ಯಾಧಿಕಾರಿ ಸತೀಶ್ ಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.