ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರಳ ಸಂಭ್ರಮದಿಂದ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

Last Updated 15 ಆಗಸ್ಟ್ 2021, 6:28 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲಾಡಳಿತದ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೋವಿಡ್ ಕಾರಣದಿಂದ ಸರಳವಾಗಿ ಸಂಭ್ರಮದಿಂದ ಭಾನುವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಧ್ವಜಾರೋಹಣ ಮಾಡಿ ಸ್ವಾತಂತ್ರೋತ್ಸವ ಸಂದೇಶ ನೀಡಿದರು.

ಗೌರವ ವಂದನೆ ಸ್ವೀಕರಿಸಿದ ಬಳಿಕ ಆಕರ್ಷಕ ಪಥಸಂಚಲನ ನಡೆಯಿತು. ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್‌.ಎ. ರವೀಂದ್ರನಾಥ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಐಜಿಪಿ ಎಸ್‌. ರವಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌, ಸಿಇಒ ಡಾ. ವಿಜಯ ಮಹಾಂತೇಶ್‌ ದಾನಮ್ಮನವರ್‌ ಅವರೂ ಇದ್ದರು.

ಎಸ್ಸೆಸ್ಸೆಲ್ಸಿಯಲ್ಲಿ 625ಕ್ಕೆ 625 ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿನಿಯರನ್ನು, ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT