ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: 8 ಇಂದಿರಾ ಕ್ಯಾಂಟೀನ್ ಆರಂಭಿಸಲು ಒತ್ತಾಯ

Last Updated 14 ಮೇ 2021, 7:45 IST
ಅಕ್ಷರ ಗಾತ್ರ

ದಾವಣಗೆರೆ: ಪಾಲಿಕೆ ವ್ಯಾಪ್ತಿಯಲ್ಲಿ ಎಂಟು ಇಂದಿರಾ ಕ್ಯಾಂಟೀನ್‌ಗಳಿವೆ. ಲಾಕ್‌ಡೌನ್‌ ನೆಪದಲ್ಲಿ ಮುಚ್ಚಲಾಗಿದೆ. ಇಂದಿರಾ ಕ್ಯಾಂಟೀನ್‌ಗಳಲ್ಲಿ ಊಟ ಉಪಾಹಾರ ಒದಗಿಸಬೇಕು ಎಂದು ಹೈಕೋರ್ಟ್‌ ನಿರ್ದೇಶನ ನೀಡಿದ ಮೇಲೆ ಇಲ್ಲಿ ಮೂರು ಕ್ಯಾಂಟೀನ್‌ಗಳನ್ನು ಮಾತ್ರ ತೆರೆಯಲಾಗಿದೆ. ಎಲ್ಲ 8 ಇಂದಿರಾ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಬೇಕು ಎಂದು ಪಾಲಿಕೆ ವಿರೋಧ ಪಕ್ಷದ ನಾಯಕ ಎ. ನಾಗರಾಜ್‌ ಒತ್ತಾಯಿಸಿದರು.

ನಾಗರಾಜ್‌ ನೇತೃತ್ವದಲ್ಲಿ ಇಂದಿರಾ ಕ್ಯಾಂಟೀನ್‌ಗಳಿಗೆ ಭೇಟಿ ನೀಡಿದ ಬಳಿಕ ಅವರು ಮಾತನಾಡಿದರು.

ಚಿಗಟೇರಿ ಆಸ್ಪತ್ರೆ ಮತ್ತು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗಳ ಬಳಿ ಇರುವ ಕ್ಯಾಂಟೀನ್‌ಗಳೆರಡರಲ್ಲಿ ಸರಿಯಾಗಿ ಊಟ ನೀಡಲಾಗುತ್ತಿತ್ತು. ದಾವಣಗೆರೆ ಎಪಿಎಂಸಿ ಪ್ರಾಂಗಣದಲ್ಲಿರುವ ಇಂದಿರಾ ಕ್ಯಾಂಟೀನ್‍ನಲ್ಲಿ 300 ಜನರ ಬದಲಿಗೆ ಕೇವಲ 100 ಜನರಿಗೆ ಊಟ ನೀಡಿದ್ದರಿಂದ ಇನ್ನು ಸರತಿ ಸಾಲಿನಲ್ಲಿ ನಿಂತಿದ್ದ 150ಕ್ಕೂ ಜನರು ವಾಪಸ್ ಹೋಗಿರುವುದು ಕಂಡು ಬಂದಿದೆ. ಹಸಿವಿನಿಂದ ವಾಪಸ್‌ ಆದವರ ಶಾೊ ಈ ಸರ್ಕಾರಕ್ಕೆ ತಟ್ಟಲಿದೆ ಎಂದು ನಾಗರಾಜ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾಲಿಕೆ ಸದಸ್ಯ ಪಾಮೇನಹಳ್ಳಿ ನಾಗರಾಜ್, ಮುಖಂಡ ಗಣೇಶ್ ಹುಲ್ಮನಿ, ಜಗದೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT