ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

8 ಕೈದಿಗಳಿಗೆ 3 ತಿಂಗಳ ಬಿಡುಗಡೆ ಭಾಗ್ಯ

ಜಿಲ್ಲಾ ಕಾರಾಗೃಹದಿಂದ ಇಂದು ಮನೆಗೆ ತೆರಳಲಿರುವ ಕೈದಿಗಳು
Last Updated 31 ಮಾರ್ಚ್ 2020, 17:18 IST
ಅಕ್ಷರ ಗಾತ್ರ

ದಾವಣಗೆರೆ: ಕೊರೊನಾ ಸೋಂಕು ಹರಡುವುದನ್ನು ತಡೆಯಲು ಜೈಲಿನೊಳಗೆ ಜನದಟ್ಟಣೆ ಕಡಿಮೆ ಮಾಡಲು ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿನ ಎಂಟು ವಿಚಾರಣಾಧೀನ ಕೈದಿಗಳಿಗೆ ಮೂರು ತಿಂಗಳ ಅವಧಿಗೆ ಬಿಡುಗಡೆ ಭಾಗ್ಯ ಲಭಿಸಿದೆ.

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಏಳು ವರ್ಷಕ್ಕಿಂತ ಕಡಿಮೆ ಅವಧಿಯ ಶಿಕ್ಷೆ ನೀಡುವ ಸಣ್ಣ–ಪುಟ್ಟ ಪ್ರಕರಣಗಳಲ್ಲಿ ಬಂಧನಕ್ಕೊಳಗಾದ ವಿಚಾರಣಾಧೀನ ಕೈದಿಗಳನ್ನು ಮಧ್ಯಂತರ ಜಾಮೀನಿನ ಮೇಲೆ ಹಾಗೂ ಶಿಕ್ಷೆಗೊಳಗಾದ ಕೈದಿಗಳನ್ನು ಪರೋಲ್‌ ಮೇಲೆ ಮೂರು ತಿಂಗಳ ಅವಧಿಗೆ ಬಿಡುಗಡೆ ಮಾಡಲು ಸರ್ಕಾರ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಅದರಂತೆ ಈ ಆದೇಶ ಹೊರಡಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಕಾರಾಗೃಹದಲ್ಲಿರುವ ಯಾವ ಕೈದಿಗಳನ್ನು ಬಿಡುಗಡೆ ಮಾಡಿ ಮನೆಗೆ ಕಳುಹಿಸಿಕೊಡಬೇಕು ಎಂಬ ಬಗ್ಗೆ ನಿರ್ಧರಿಸಲು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದಕೆ.ವಿ. ಗೀತಾ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಪಬ್ಲಿಕ್ ಪ್ರಾಸಿಕ್ಯೂಟರ್‌ ಹಾಗೂ ಜಿಲ್ಲಾ ಕಾರಾಗೃಹದ ಅಧೀಕ್ಷಕರು ಸದಸ್ಯರಾಗಿರುವ ಈ ಸಮಿತಿಯ ಮುಂದೆ 17 ಕೈದಿಗಳ ಬಿಡುಗಡೆಗೆ ಪ್ರಸ್ತಾವ ಇಡಲಾಗಿತ್ತು. ಇವರ ಪೈಕಿ ಒಂದೇ ಪ್ರಕರಣದಲ್ಲಿ ಭಾಗಿಯಾಗಿರುವ ಎಂಟು ಕೈದಿಗಳನ್ನು ಮಾತ್ರ ಸದ್ಯಕ್ಕೆ ಬಿಡುಗಡೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಬುಧವಾರ ಬೆಳಿಗ್ಗೆ 7 ಗಂಟೆಯ ಹೊತ್ತಿಗೆ ಈ ಕೈದಿಗಳನ್ನು ಜೈಲಿನಿಂದ ಮನೆಗೆ ಕಳುಹಿಸಿಕೊಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಪೊಲೀಸ್‌ ವಾಹನದಲ್ಲೇ ಮನೆಗೆ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬಸ್‌ ಸೇರಿ ಯಾವುದೇ ಪ್ರಯಾಣಿಕ ವಾಹನಗಳು ಇರುವುದಿಲ್ಲ. ಹೀಗಾಗಿ ಕೈದಿಗಳನ್ನು ಪೊಲೀಸ್‌ ವಾಹನದಲ್ಲೇ ಮನೆಗೆ ಕಳುಹಿಸಿಕೊಡಲು ನಿರ್ಧರಿಸಲಾಗಿದೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಅವರ ನಿರ್ದೇಶನದಂತೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ವಾಹನದಲ್ಲಿ ಕೈದಿಗಳನ್ನು ಸುರಕ್ಷಿತವಾಗಿ ಅವರ ಮನೆಗಳಿಗೆ ಬಿಟ್ಟು ಬರಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಬಿಡುಗಡೆ ಹೊಂದಲಿರುವ ಎಂಟು ಕೈದಿಗಳ ಪೈಕಿ ಇಬ್ಬರು ಬೆಳಗಾವಿ ಜಿಲ್ಲೆಯವರೂ ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT