ಬುಧವಾರ, ಸೆಪ್ಟೆಂಬರ್ 30, 2020
26 °C

ದಾವಣಗೆರೆ: 920 ಗ್ರಾಂ ಗಾಂಜಾ ವಶ: ಮೂವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ತಾಲ್ಲೂಕಿನ ಶಿರಮಗೊಂಡನಹಳ್ಳಿಯ ಆಂಜನೇಯ ಬ್ರಿಕ್ಸ್‌ ಫ್ಯಾಕ್ಟರಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿ ₹9500 ಮೌಲ್ಯದ 920 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಜಯನಗರದ ಶಾರೂಕ್‌ ಖಾನ್ (21), ಭದ್ರಾವತಿಯ ಮುಜಿಬುಲ್ಲಾ ಷರೀಫ್ (20) ಹಾಗೂ ಆಜಾದ್‌ನಗರದ ಮುಬಾರಕ್ ಖಾನ್ (20) ಬಂಧಿತರು.

ಮಾಹಿತಿಯ ಮಾಹಿತಿಯ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ದಾಳಿ ನಡೆಸಿದ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್‌ ಮುಸ್ತಾಕ್ ಅಹಮ್ಮದ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳಿಂದ ಗಾಂಜಾದ ಜೊತೆಗೆ ₹1400 ವಶಪಡಿಸಿಕೊಂಡಿದ್ದು, ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು