ಗುರುವಾರ , ಜನವರಿ 20, 2022
15 °C

ಹರಪನಹಳ್ಳಿ: ಜಿಟ್ಟಿನಕಟ್ಟೆ ಗ್ರಾಮದಲ್ಲಿ ಕರಡಿ ಪ್ರತ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹರಪನಹಳ್ಳಿ: ತಾಲ್ಲೂಕಿನ ಜಿಟ್ಟಿನಕಟ್ಟೆ ಗ್ರಾಮದ ಸಮೀಪ ಶನಿವಾರ ಸಂಜೆ ಕರಡಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

ಗ್ರಾಮವು ಗುಡ್ಡಕ್ಕೆ ಹೊಂದಿಕೊಂಡಿದ್ದು, ವನ್ಯಜೀವಿಗಳು ಆಹಾರ ಅರಸಿ ಗ್ರಾಮದತ್ತ ಬರುತ್ತಿವೆ. ಕರಡಿಯೂ ಗ್ರಾಮದವರೆಗೂ ಬಂದಿದ್ದು, ಗ್ರಾಮಸ್ಥರು ನೋಡಿ ಕೇಕೆ ಹಾಕುತ್ತಿದ್ದಂತೆಯೇ ಕರಡಿ ಗುಡ್ಡದ ಕಡೆಗೆ ಓಡಿತು ಎಂದು ಗ್ರಾಮಸ್ಥರು ತಿಳಿಸಿದರು.

‘ಕರಡಿ, ಚಿರತೆ ಹಾಗಾಗ ಗ್ರಾಮದ ಸಮೀಪ ಪ್ರತ್ಯಕ್ಷವಾಗುತ್ತವೆ. ಗ್ರಾಮಸ್ಥರು ಒಂಟಿಯಾಗಿ ಕೃಷಿ ಕೆಲಸಕ್ಕೆ ತೆರಳುತ್ತಾರೆ. ವನ್ಯಜೀವಿಗಳ ಹಾವಳಿಯಿಂದ ಭಯಗೊಂಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಕರಡಿ ಸೆರೆ ಹಿಡಿಯಬೇಕು’ ಎಂದು ಗ್ರಾಮದ ಯುವ ಮುಖಂಡ ರಾಜು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು