ಭಾನುವಾರ, ಸೆಪ್ಟೆಂಬರ್ 26, 2021
21 °C

ನಾಪತ್ತೆಯಾಗಿದ್ದ ಬಾಲಕ ಕೆರೆಗೆ ಬಿದ್ದು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ನಗರದ ಚಿಕ್ಕಮಣಿ ದೇವರಾಜು ಅರಸು ಬಡಾವಣೆಯಲ್ಲಿ ಮಾತು ಬಾರದ ಬಾಲಕ ಶನಿವಾರ ನಾಪತ್ತೆಯಾಗಿದ್ದ. ಭಾನುವಾರ ಟಿ.ವಿ. ಸ್ಟೇಷನ್‌ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.

ಕಲ್ಲೇಶ್‌ ಅವರ ಮಗ ಗಣ್ಯ(7) ಮೃತಪಟ್ಟ ಬಾಲಕ. ಶನಿವಾರ ಮಧ್ಯಾಹ್ನ ಮನೆಯಿಂದ ಹೊರಗೆ ಹೋದ ಬಾಲಕ ನಾಪತ್ತೆಯಾಗಿದ್ದ. ಮನೆಯವರು ಹುಡುಕಿ ಪತ್ತೆಯಾಗದೇ ಇದ್ದಾಗ ಕೆಟಿಜೆ ನಗರ ಪೊಲೀಸರಿಗೆ ದೂರು ನೀಡಿದ್ದರು.

ಈಜು ಬಾರದ, ಮಾತು ಬಾರದ ಹುಡುಗ ಕೆರೆ ಬಳಿ ಹೋದಾಗ ಆಯತಪ್ಪಿ ಬಿದ್ದಿರಬೇಕು ಎಂದು ಶಂಕಿಸಲಾಗಿದೆ. ಕೆರೆಗೆ ಟ್ರೆಂಚ್‌ ಮಾಡದೇ ಮಹಾನಗರ ಪಾಲಿಕೆ ನಿರ್ಲಕ್ಷ್ಯ ವಹಿಸಿದ್ದರಿಂದಲೇ ಮಗು ಮೃತಪಟ್ಟಿದೆ ಎಂದು ಸ್ಥಳೀಯರು ಪ್ರತಿಭಟನೆ ನಡೆಸಿದರು. ಬಾಲಕನ ಮನೆಯವರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಮನೆಯವರ ಆಕ್ರಂದನ ಮುಗಿಲುಮುಟ್ಟಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು