ದಾವಣಗೆರೆ: ಬಿಜೆಪಿಯನ್ನು ಇನ್ನಷ್ಟು ಸದೃಢಗೊಳಿಸಲು ದಾವಣಗೆರೆಯಲ್ಲಿ ನಡೆಯುವ ರಾಜ್ಯ ಕಾರ್ಯಕಾರಿಣಿ ಮೈಲಿಗಲ್ಲಾಗಲಿದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ತಿಳಿಸಿದರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಕಾರ್ಯಕಾರಿಣಿಗೆ ಪೂರ್ವಭಾವಿಯಾಗಿ ಕಾರ್ಯಾಲಯ ಉದ್ಘಾಟಿಸಿ ಅವರು ಮಾತನಾಡಿದರು.

ಸೆ.18ರಂದು ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ. ಸೆ.19ರಂದು ತ್ರಿಶೂಲ್ ಕಲಾಭವನದಲ್ಲಿ ರಾಜ್ಯ ಕಾರ್ಯಕಾರಿಣಿ ಜರುಗಲಿದೆ. ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, ಪ್ರಕೋಷ್ಠಗಳ ಸಂಚಾಲಕರು ಪಾಲ್ಗೊಳ್ಳಲಿದ್ದಾರೆ ಎಂದರು.

ಮುಂಬರುವ ಚುನಾವಣೆಗಳಲ್ಲಿ ಪಕ್ಷವನ್ನು ಗೆಲ್ಲಿಸುವುದು, ಪಕ್ಷದ ಬಲವರ್ಧನೆಗೆ ಕೈಗೊಳ್ಳಬೇಕಾದ ಕಾರ್ಯ ಚಟುವಟಿಕೆ ಕುರಿತು ಚರ್ಚಿಸಲಾಗುವುದು. ಸಭೆಯಲ್ಲಿ 2 ಪ್ರಮುಖ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಶಾಸಕ ಎಸ್.ಎ.ರವೀಂದ್ರನಾಥ್, ಬಿಜೆಪಿ ಪ್ರಕೋಷ್ಠಗಳ ಸಹ ಸಂಚಾಲಕ ಡಾ.ಎ.ಎಚ್. ಶಿವಯೋಗಿಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಹನಗವಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್, ಸುಧಾ ಜಯರುದ್ರೇಶ್, ಮೇಯರ್ ಎಸ್.ಟಿ. ವೀರೇಶ್, ಮುಖಂಡರಾದ ಮಂಜಾನಾಯ್ಕ, ಸೊಕ್ಕೆ ನಾಗರಾಜ, ಶಿವರಾಜ ಪಾಟೀಲ್, ಶ್ರೀನಿವಾಸ ದಾಸಕರಿಯಪ್ಪ, ಹೇಮಂತ್ ಕುಮಾರ್, ವೈ. ಮಲ್ಲೇಶ, ಆನಂದರಾವ್ ಶಿಂಧೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.