ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಗ್ರ ನಗರ ಅಭಿವೃದ್ಧಿ ಯೋಜನೆಗೆ ಹೊಸ ಆಯಾಮ

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿಕೆ
Last Updated 15 ಆಗಸ್ಟ್ 2021, 16:10 IST
ಅಕ್ಷರ ಗಾತ್ರ

ದಾವಣಗೆರೆ: 2018ರಲ್ಲಿ ಉದ್ದೇಶಿಸಲಾಗಿದ್ದ ಸಮಗ್ರ ನಗರ ಅಭಿವೃದ್ಧಿ ಯೋಜನೆಯನ್ನು ಈವರೆಗೂ ಅಂದುಕೊಂಡಂತೆ ರೂಪಿಸಲು ಆಗಿಲ್ಲ. ಬೆಂಗಳೂರಿನಲ್ಲಿ ಸೋಮವಾರ ನಡೆಯುವ ಉನ್ನತ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ, ಹೊಸ ಆಯಾಮ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದರು.

ದಾವಣಗೆರೆಯಲ್ಲಿ ಭಾನುವಾರ ಕ್ರೆಡಾಯ್ ನೂತನ ಕೇಂದ್ರದ ಉದ್ಘಾಟನೆ ಮತ್ತು ಅನುಸ್ಥಾಪನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಕಲಬುರ್ಗಿ, ಹುಬ್ಬಳ್ಳಿ–ಧಾರವಾಡ, ಬೆಳಗಾವಿ, ದಾವಣಗೆರೆ, ಶಿವಮೊಗ್ಗ, ಮೈಸೂರು ಹಾಗೂ ಮಂಗಳೂರು ನಗರಗಳಲ್ಲಿಸಿಡಿಪಿ ಪ್ಲಾನ್ ಆಗಿಲ್ಲ. ಜನರಿಗೆ ಎಲ್ಲೆಲ್ಲಿ, ಯಾವ ರೀತಿ ಸಮಸ್ಯೆಯಾಗಿದೆ ಎಂಬುದನ್ನು ಮನಗಂಡು ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಅನೇಕ ಬದಲಾವಣೆ ತರಲು ಕಾರ್ಯೋನ್ಮುಖರಾಗುತ್ತೇವೆ. ಬಹಳ ದಿನಗಳ ಈ ಸಮಸ್ಯೆ ಮುಕ್ತಿ ಕಾಣುವ ಹಂತಕ್ಕೆ ಬಂದಿದೆ’ ಎಂದು ಹೇಳಿದರು.

‘ಪ್ರತಿ 10 ವರ್ಷಗಳಿಗೊಮ್ಮೆ ಸಮಗ್ರ ನಗರ ಅಭಿವೃದ್ಧಿ ಯೋಜನೆ ರೂಪಿತವಾಗುತ್ತಿದೆ. 2008ರಲ್ಲಿ ರೂಪಿಸಲಾಗಿತ್ತು. 2018ರ ಯೋಜನೆ ಈವರೆಗೂ ಅನುಷ್ಠಾನಕ್ಕೆ ಬಂದಿಲ್ಲ ಎಂದು ಕ್ರೆಡಾಯ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ. ಅಜಯ್‌ಕುಮಾರ್ ಅವರು ಸಚಿವರ ಗಮನಕ್ಕೆ ತಂದರು. ಈ ವೇಳೆ ಮೇಲಿನಂತೆ ಸಚಿವರು ಪ್ರತಿಕ್ರಿಯಿಸಿದರು.

‘ರಿಯಲ್ ಎಸ್ಟೇಟ್‌ ಉದ್ಯಮಿಗಳು ಬಡಾವಣೆಗಳನ್ನು ಅಭಿವೃದ್ಧಿಪಡಿಸುವಾಗ ಮೂಲಸೌಲಭ್ಯಗಳನ್ನು ಸಮಪರ್ಕವಾಗಿ ಕಲ್ಪಿಸಬೇಕು. ಅರ್ಧಂಬರ್ಧ ಕಾಮಗಾರಿಗಳನ್ನು ಮಾಡಿದರೆ ಜನರಿಗೆ ತೊಂದರೆಯಾಗಲಿದೆ. ಇದರಿಂದಾಗಿ ಶುಲ್ಕ ವಸೂಲಾತಿಗೆ ಹೊಡೆತ ಬೀಳಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT