ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಾಗರಿಕ ಸಂಸ್ಕೃತಿ ಬಿಂಬಿಸುವ ತಂಗಡಗಿ ಹೇಳಿಕೆ: ಬಿ.ಎಂ.ಸತೀಶ್

Published 28 ಮಾರ್ಚ್ 2024, 5:09 IST
Last Updated 28 ಮಾರ್ಚ್ 2024, 5:09 IST
ಅಕ್ಷರ ಗಾತ್ರ

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಮಾತನಾಡುವವರನ್ನು ಕಪಾಳ ಮೋಕ್ಷ ಮಾಡಬೇಕು ಎಂದು ಹೇಳಿಕೆ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರ ಹೇಳಿಕೆ ಅನಾಗರೀಕ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಕೊಳೇನಹಳ್ಳಿ ಬಿ.ಎಂ.ಸತೀಶ್ ಹೇಳಿದರು.

‘ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಕಾಂಗ್ರೆಸ್‌ ಮೋದಿಯವರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದೆ. ದೇಶದಲ್ಲಿ ಪಾತಾಳಕ್ಕೆ ಕುಸಿದಿರುವ ಕಾಂಗ್ರೆಸ್‌, ರಾಜ್ಯದಲ್ಲೂ ಅದೇ ಭಯದಿಂದಾಗಿ ಈ ರೀತಿ ಹೇಳಿಕೆಗಳನ್ನು ನೀಡುತ್ತಿದೆ. ಯುವಕರು ಮೋದಿಯವರ ಆಡಳಿತವನ್ನು ಮೆಚ್ಚಿ ಮೂರನೇ ಬಾರಿಗೆ ಮೋದಿಯವರನ್ನು ಗೆಲ್ಲಿಸುವ ಉತ್ಸಾಹವನ್ನು ಕಾಂಗ್ರೆಸ್ಸಿಗೆ ಸಹಿಸಲು ಆಗುತ್ತಿಲ್ಲ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ವಿಶ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶ್ವವೇ ಗೌರವಿಸುತ್ತಿದೆ. ಅವರ ಬಗ್ಗೆ ಹಗುರ ಹೇಳಿಕೆ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಸಂಸ್ಕೃತಿಯೇ ಇಲ್ಲದಂತಾಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ನವರು ಪ್ರಧಾನಿ ಅವರನ್ನು ಅವಾಚ್ಯವಾಗಿ ನಿಂದಿಸಿದರೆ ಮಹಿಳೆಯರು ಹಾಗೂ ಸಾರ್ವಜನಿಕರು ಘೋರ ನಿಲುವುಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಈಗಾಗಲೇ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಶಿವರಾಜ ತಂಗಡಗಿಯವರು ಕೂಡಲೇ ಕ್ಷಮೆ ಯಾಚಿಸಬೇಕು. ಕಾಂಗ್ರೆಸ್ ವರಿಷ್ಠರು ಸಚಿವ ಸ್ಥಾನದಿಂದ ಪದಚ್ಯುತಿಗೊಳಿಸಬೇಕು’ ಎಂದು ಬಿಜೆಪಿ ಯುವ ಘಟಕದ ಉಪಾಧ್ಯಕ್ಷ ಶ್ಯಾಮ್ ಆಗ್ರಹಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಮೇಕ್‌ ಇನ್‌ ಇಂಡಿಯಾ ಯೋಜನೆಯ ಮೂಲಕ 80–90 ಲಕ್ಷ ಯುವಕರಿಗೆ ಉದ್ಯೋಗ ದೊರಕುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಹಗುರ ಹೇಳಿಕೆ ನೀಡಿರುವ ಕಾಂಗ್ರೆಸ್‌ನವರು ಈಚೆಗೆ ನಡೆದ ರಾಜ್ಯಸಭಾ ಚುನಾವಣೆಯ ವಿಜಯೋತ್ಸವದ ವೇಳೆ ಪಾಕೀಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರಿಗೆ ಯಾವ ಕ್ರಮ ಕೈಗೊಂಡಿದ್ದೀರಿ’ ಎಂದು ಮಹಾನಗರ ಪಾಲಿಕೆ ಸದಸ್ಯ ಆರ್. ಶಿವಾನಂದ ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT