ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಆಮ್ ಆದ್ಮಿ ಪಾರ್ಟಿ (ಎಎಪಿ) ಅಭ್ಯರ್ಥಿಯಾಗಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್. ಶಿವಕುಮಾರಪ್ಪ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.

ಮೆರವಣಿಗೆ ಮೂಲಕ ಮಹಾನಗರ ಪಾಲಿಕೆಯ ಚುನಾವಣಾಧಿಕಾರಿ ಕಚೇರಿಗೆ ಧಾಗಮಿಸಿದ ಅವರು ಉಮೇದುವಾರಿಕೆ ಸಲ್ಲಿಸಿದರು.

‘ಭ್ರಷ್ಟಾಚಾರ, ವಂಶಪಾರಂಪರ್ಯ ಆಡಳಿತ ಅಂತ್ಯಗೊಳಿಸುವುದು ಎಎಪಿ ಉದ್ದೇಶ. ಶಿಕ್ಷಣ ಹಾಗೂ ವೈದ್ಯಕೀಯ ಸೇವೆ ಜನರಿಗೆ ಸಿಗಬೇಕು. ಉತ್ತಮ ಸೇವೆ ನೀಡಲು ಎಎಪಿಗೆ ಅವಕಾಶ ಮಾಡಿಕೊಡಿ. ಹಣದ ಆಮಿಷಕ್ಕೆ ಒಳಗಾಗದೇ ಹಕ್ಕು ಚಲಾವಣೆ ಮಾಡಿ’ ಎಂದು ಅಭ್ಯರ್ಥಿ ಶಿವಕುಮಾರಪ್ಪ ಮನವಿ ಮಾಡಿದರು.

‘ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಜಾದ್ ನಗರ ಸರ್ಕಾರಿ ಶಾಲೆಯನ್ನು ಉಳಿಸಲು ಎಎಪಿ ಹೋರಾಟ ನಡೆಸಿದೆ. ಇದರಿಂದ ಎಚ್ಚತ್ತ ಶಿಕ್ಷಣ ಇಲಾಖೆ ಶಾಲೆಯನ್ನು ಅಭಿವೃದ್ಧಿ ಮಾಡಿದೆ. ಇದರಿಂದ ಕ್ಷೇತ್ರದಲ್ಲಿ ಸಾಕಷ್ಟು ವಿದ್ಯಾರ್ಥಿಗಳಿಗೆ ಅನುಕೂಲ ಆಗಿದೆ’ ಎಂದರು.

‘ರಸ್ತೆ ನಿರ್ಮಾಣ ಮಾಡಿದ ಮಾತ್ರಕ್ಕೆ ಕ್ಷೇತ್ರ ಅಭಿವೃದ್ಧಿ ಆಗದು. ₹ 100 ಕೋಟೆಯನ್ನು ರಾಜ್ಯ ಸರ್ಕಾರ ಬಜೆಟ್ನಲ್ಲಿ ಅನುದಾನ ನೀಡಿದೆ. ಈ ಹಣ ಹೇಗೆ ಖರ್ಚು ಮಾಡಲಾಗುತ್ತದೆ ಎಂಬುದನ್ನು ಸರ್ಕಾರ ಈ ವರೆಗೂ ಸ್ಪಷ್ಟವಾಗಿ ಹೇಳಿಲ್ಲ. ಪರ್ಯಾಯ ರಾಜಕಾರಣಕ್ಕೆ ಜನರು ಅವಕಾಶ ನೀಡುತ್ತಾರೆ ಎಂಬ ವಿಶ್ವಾಸ ಇದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ಎಎಪಿ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಸೀತಾರಾಂ ಗುಂಡಪ್ಪ, ‘ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಹಣ ಹಾಗೂ ಜಾತಿ ಆಧಾರದ ಮೇರೆಗೆ ಟಿಕೆಟ್ ನೀಡಲಾಗಿದೆ. ಜಾತಿ, ಮತ ಬಿಟ್ಟು ಸ್ವಚ್ಛ ರಾಜಕಾರಣಕ್ಕೆ ಹೆಜ್ಜೆ ಇಟ್ಟಿದ್ದು ಆಮ್ ಆದ್ಮಿ ಪಕ್ಷ ಮಾತ್ರ. ಪಂಜಾಬ್ ಹಾಗೂ ದೆಹಲಿಯಲ್ಲಿ ಸ್ವಚ್ಛ ಆಡಳಿತ ನೀಡಿದ್ದೇವೆ. ಜನರು ಆಮಿಷಗಳಿಗೆ ಒಳಗಾಗದೇ ಮತಚಲಾವಣೆ ಮಾಡಿ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.