ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಎಪಿ: ಹೊನ್ನಾಳಿ ತಾಲ್ಲೂಕು ಘಟಕ ರಚನೆ

Published 17 ಡಿಸೆಂಬರ್ 2023, 15:48 IST
Last Updated 17 ಡಿಸೆಂಬರ್ 2023, 15:48 IST
ಅಕ್ಷರ ಗಾತ್ರ

ಹೊನ್ನಾಳಿ: ‘ದೆಹಲಿಯಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನಡೆಸುತ್ತಿರುವ ಎಎಪಿ ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ’ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ್ ಹೇಳಿದರು.

ಭಾನುವಾರ ಪಟ್ಟಣದಲ್ಲಿ ನೂತನ ಪದಾಧಿಕಾರಿಗಳ ರಚನೆ ಹಾಗೂ ಸಂಘಟನೆ ಕುರಿತು ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡಿದರು.

‘ದೆಹಲಿಯಲ್ಲಿ 2 ಬಾರಿ ಅಧಿಕಾರಕ್ಕೆ ಬಂದಿರುವ ನಮ್ಮ ಪಕ್ಷ ಇದೇ ಮೊದಲ ಬಾರಿಗೆ ಪಂಜಾಬ್‍ನಲ್ಲಿ ಅಧಿಕಾರಕ್ಕೆ ಬಂದಿದೆ. ಎಎಪಿ ಪಕ್ಷದ ಉಚಿತ ಯೋಜನೆಗಳನ್ನು ನಕಲು ಮಾಡಿರುವ ಕಾಂಗ್ರೆಸ್ ಸರ್ಕಾರ ಅದನ್ನು ಹೇಗೆ ಅನುಷ್ಠಾನಕ್ಕೆ ತರಬೇಕು ಎಂದು ಗೊತ್ತಿಲ್ಲದೆ ರಾಜ್ಯದ ಜನರನ್ನು ವಂಚಿಸುತ್ತಿದೆ. ಭರವಸೆ ನೀಡಿ ಮತ ಪಡೆದ ಕಾಂಗ್ರೆಸ್ ಉಚಿತ ಯೋಜನೆಗಳನ್ನು ಫಲಾನುಭವಿಗಳಿಗೆ ವಿತರಿಸುವಲ್ಲಿ ವಿಫಲವಾಗಿದೆ’ ಎಂದರು.

ಪದಾಧಿಕಾರಿಗಳು:

ಪಕ್ಷದ ಹೊನ್ನಾಳಿ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಲಕ್ಷ್ಮೀಕಾಂತ್, ಉಪಾಧ್ಯಕ್ಷರಾಗಿ ಬಸವರಾಜಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ನರಸಿಂಹಪ್ಪ, ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ್ ಬಾಬು ನೆಲಹೊನ್ನೆ, ತಾಲ್ಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಜಾವಿದ್‍ಖಾನ್, ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷರಾಗಿ ಹಳದಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಸಂಘಟನಾ ಕಾರ್ಯದರ್ಶಿ ಆದಿಲ್ ಖಾನ್, ಕಾರ್ಯದರ್ಶಿ ರವಿಂದ್ರ ಕೆ., ಹರಿಹರ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT