ಗುರುವಾರ , ಜುಲೈ 29, 2021
26 °C

ನಗರ ಯೋಜನೆ ಸಹಾಯಕ ನಿರ್ದೇಶಕ ಎಚ್‌.ಆರ್‌. ಕೃಷ್ಣಪ್ಪ ಮನೆ ಮೇಲೆ ಎಸಿಬಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಚನ್ನಗಿರಿ ತಾಲ್ಲೂಕಿನಲ್ಲಿ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದು, ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಅಧಿಕಾರಿಗಳಿಗೆ ಶಾಕ್‌ ನೀಡಿದ್ದಾರೆ.

ಚನ್ನಗಿರಿ ತಾಲ್ಲೂಕಿನ ದೇವರಹಳ್ಳಿಯ ನಿವಾಸಿ ನಗರ ಯೋಜನೆ ಸಹಾಯಕ ನಿರ್ದೇಶಕ ಎಚ್‌.ಆರ್‌. ಕೃಷ್ಣಪ್ಪ ಅವರ ಮನೆ ಮೇಲೆ ದಾಳಿ ನಡೆಸಿದರು. ಎಚ್‌.ಆರ್‌. ಕೃಷ್ಣಪ್ಪ ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ನಗರ ಯೋಜನೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದು, ದೇವರಹಳ್ಳಿಯಲ್ಲಿ ಮನೆ ಮಾಡಿಕೊಂಡಿದ್ದರು. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಸಂಬಂಧ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು ಅವರ ಪತ್ನಿಯ ಸಂತೇಬೆನ್ನೂರಿನ ಮನೆ ಮೇಲೂ ದಾಳಿ ನಡೆಸಿದ್ದಾರೆ.

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಸಂಬಂಧ ವಿವರ ಕಲೆ ಹಾಕುತ್ತಿದ್ದು, ಬಳಿಕ ಹೆಚ್ಚಿನ ಮಾಹಿತಿ ನೀಡುವುದಾಗಿ ಎಸಿಬಿ ಡಿವೈಎಸ್‌ಪಿ ತಿಳಿಸಿದ್ದಾರೆ.

ಒಂಬತ್ತು ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ: ರಾಜ್ಯದ ಹಲವೆಡೆ ಶೋಧ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು