ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಗಿರಿ: ವಾಹನ ಪಲ್ಟಿ; ವ್ಯಕ್ತಿ ಸಾವು

Published 20 ಡಿಸೆಂಬರ್ 2023, 4:31 IST
Last Updated 20 ಡಿಸೆಂಬರ್ 2023, 4:31 IST
ಅಕ್ಷರ ಗಾತ್ರ

ಚನ್ನಗಿರಿ: ತಾಲ್ಲೂಕು ಬೆಂಕಿಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಇರುವ ಕರಿಯಮ್ಮ ದೇವಸ್ಥಾನದ ಬಳಿ ಎಳನೀರು ತುಂಬಿದ ವಾಹನವೊಂದು ಪಲ್ಟಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.

ತಾಲ್ಲೂಕಿನ ನೆಲ್ಲಿಹಂಕಲು ಗ್ರಾಮದ ಕೃಷ್ಣನಾಯ್ಕ (38) ಮೃತ. ತಾವರೆಕೆರೆ ಗ್ರಾಮದ ಪಿಕಪ್ ವಾಹನದಲ್ಲಿ ಎಳನೀರು ತುಂಬಿಕೊಂಡು ಚಿತ್ರದುರ್ಗ ಕಡೆಯಿಂದ ಚನ್ನಗಿರಿ ಕಡೆಗೆ ಬರುತ್ತಿರುವ ಸಂದರ್ಭದಲ್ಲಿ ಕರಿಯಮ್ಮ ದೇವಸ್ಥಾನದ ಬಳಿ ವಾಹನ ಪಲ್ಟಿಯಾಗಿದೆ.

ಪಿಕಪ್ ವಾಹನದಲ್ಲಿದ್ದ ರಮೇಶ್(20) ತೀವ್ರವಾಗಿ ಗಾಯಗೊಂಡು ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT