ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಣಸಿನಕಾಯಿ ತುಂಬಿದ್ದ ವಾಹನ ಪಲ್ಟಿ: ಒಬ್ಬನ ಸಾವು

Last Updated 26 ಜನವರಿ 2022, 15:36 IST
ಅಕ್ಷರ ಗಾತ್ರ

ದಾವಣಗೆರೆ: ನಗರದ ಹೊರವಲಯದಲ್ಲಿರುವ ರಾಸ್ತಾ ಹೋಟೆಲ್‌ ಎದುರಿಗೆ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಒಣ ಮೆಣಸಿನಕಾಯಿ ಚೀಲ ಸಾಗಿಸುತ್ತಿದ್ದ ಟಾಟಾ ಏಸ್‌ ವಾಹನ ಬುಧವಾರ ಪಲ್ಟಿಯಾಗಿ ಬಿದ್ದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ವೈ.ರಾಮಪುರಂನ ಲಾಲಾ ಸ್ವಾಮಿ (45) ಮೃತಪಟ್ಟಿದ್ದಾರೆ. ರಾಮಾಂಜನೇಯ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕಾಶ್‌ ಹಾಗೂ ಮಹೇಶ್‌ ಎಂಬುವವರೂ ಘಟನೆಯಲ್ಲಿ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಿಂದ ಬೆಳಿಗ್ಗೆ 7 ಗಂಟೆಗೆ ಒಣ ಮೆಣಸಿನಕಾಯಿಯನ್ನು ಟಾಟಾ ಏಸ್‌ ವಾಹನದಲ್ಲಿ ತುಂಬಿಕೊಂಡು ಹಾವೇರಿ ಜಿಲ್ಲೆಯ ಬ್ಯಾಡಗಿ ಮಾರುಕಟ್ಟೆಗೆ ಹೊರಟಿದ್ದರು. ಮಧ್ಯಾಹ್ನ 3 ಗಂಟೆ ಹೊತ್ತಿಗೆ ರಾಸ್ತಾ ಹೋಟೆಲ್‌ ಎದುರಿಗೆ ವಾಹನ ಬರುತ್ತಿದ್ದಾಗ ಟೈರ್‌ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ. ಸ್ಥಳದಲ್ಲೇ ಹೊನ್ನೂರ್‌ ಸಾಬ್‌ ಮೃತಪಟ್ಟಿದ್ದಾರೆ.

ಮೆಣಸಿನಕಾಯಿ ಚೀಲಗಳು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿದ್ದವು. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಗಾಯಾಳುಗಳ ನೆರವಿಗೆ ಬಂದರು. ಕೆಲ ಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.

ದಾವಣಗೆರೆ ದಕ್ಷಿಣ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT