ದಾವಣಗೆರೆ: ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಇಲ್ಲಿನ ಜಯನಗರದಲ್ಲಿನ ಚರ್ಚ್ ಒಂದರ ಪಾದ್ರಿ ಬಿ.ರಾಜಶೇಖರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

‘ಚರ್ಚ್‌ಗೆ ಹೋಗುತ್ತಿದ್ದಾಗ ನನ್ನ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ, ಬಳಿಕ ಮದುವೆಯಾಗುವುದಾಗಿ ನಂಬಿಸಿ ನನ್ನೊಂದಿಗೆ ದೈಹಿಕ ಸಂಬಂಧ ಇರಿಸಿಕೊಂಡಿದ್ದ. ಅಲ್ಲದೇ ನನ್ನಿಂದ ₹ 25ರಿಂದ ₹ 30 ಲಕ್ಷ ಹಣ ಪಡೆದು ವಂಚಿಸಿದ್ದಾನೆ. ಹಣ ವಾಪಸ್ ಕೇಳಿದ್ದಕ್ಕೆ ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿದ್ದಾನೆ’ ಎಂದು ಸಂತ್ರಸ್ತ ಮಹಿಳೆ ದೂರು ನೀಡಿದ್ದರು.

ಇಲ್ಲಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಾರ್ಚ್ 9ರಂದು ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಆಧರಿಸಿ ಆಂಧ್ರಪ್ರದೇಶದ ಹೈದರಾಬಾದ್‌ನಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ, ಕರೆತಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.