ಬುಧವಾರ, ಆಗಸ್ಟ್ 4, 2021
22 °C

ನಿಯಮ ಉಲ್ಲಂಘನೆಯಾಗಿದ್ದರೆ ಕ್ರಮ: ಬೊಮ್ಮಾಯಿ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಮಗನ ಮದುವೆಯಲ್ಲಿ ನಿಯಮ ಉಲ್ಲಂಘನೆ ಆಗಿದೆಯೇ ಇಲ್ಲವೇ ಎಂಬುದನ್ನು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಿಸಿರುತ್ತಾರೆ. ಉಲ್ಲಂಘನೆ ಆಗಿದ್ದರೆ ಕ್ರಮ ಕೈಗೊಳ್ಳುತ್ತಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.

ಹರಪನಹಳ್ಳಿ ತಾಲ್ಲೂಕಿನ ಲಕ್ಮೀಪುರದಲ್ಲಿ ಸೋಮವಾರ ನಡೆದ ಮದುವೆಯಲ್ಲಿ 10ಕ್ಕೂ ಅಧಿಕ ಸಚಿವರು ಭಾಗವಹಿಸಿದ್ದರು. ಕೋವಿಡ್-19 ನಿಯಮ ಉಲ್ಲಂಘನೆ ಆಗಿತ್ತು. ಈ ಬಗ್ಗೆ ದಾವಣಗೆರೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಪರಮೇಶ್ವರ ನಾಯ್ಕ ನನಗೂ ಸ್ನೇಹಿತರು. ಮಗನ ಮದುವೆ ಮಾಡಲು ಸ್ವತಂತ್ರರು. ಕೊರೊನಾ ಬಾರದಿರಲಿ ಎಂದು ಕೆಲವು ನಿಯಮಗಳನ್ನು ಮಾಡಲಾಗಿದೆ ಎಂದರು.

ಪೋಲಿಸ್ ಇಲಾಖೆಯ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದೆ. ಔರದ್ಕರ್ ವರದಿ ಜಾರಿ ಮಾಡಿ ಪೊಲೀಸರ ಮೂಲವೇತನ ಹೆಚ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು