ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಗಳೂರು | ಬ್ಯಾರೇಜ್ ಎತ್ತರ ಹೆಚ್ಚಿಸಲು ಕ್ರಮ: ದೇವೇಂದ್ರಪ್ಪ

Published : 27 ಆಗಸ್ಟ್ 2024, 15:52 IST
Last Updated : 27 ಆಗಸ್ಟ್ 2024, 15:52 IST
ಫಾಲೋ ಮಾಡಿ
Comments

ಜಗಳೂರು: ತಾಲ್ಲೂಕಿನ ಮೂಡಲ‌ಮಾಚಿಕೆರೆ ಸಿದ್ದಿಹಳ್ಳಿ ಮಾರ್ಗಮಧ್ಯೆ ಜಿನಿಗಿ ಹಳ್ಳಕ್ಕೆ ₹5 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಬ್ರಿಡ್ಜ್ ಕಂ ಬ್ಯಾರೇಜ್ ಎತ್ತರವನ್ನು ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.

ಬ್ಯಾರೇಜ್ ನಿರ್ಮಾಣ ಕಾಮಗಾರಿಯನ್ನು ಮಂಗಳವಾರ ಪರಿಶೀಲಿಸಿದ ನಂತರ ಅವರು ಮಾತನಾಡಿದರು. 

₹5 ಕೋಟಿ ವೆಚ್ಚದಲ್ಲಿ ಗುಣಮಟ್ಟದ ಕಾಮಗಾರಿ ಕೈಗೊಂಡಿದ್ದು, ಪೂರ್ಣಗೊಳ್ಳುವ ಹಂತದಲ್ಲಿದೆ. ಇದರಿಂದ ತೊರೆಸಾಲು ಭಾಗದಲ್ಲಿ ಅಂತರ್ಜಲದ ಮಟ್ಟ ಹೆಚ್ಚಳವಾಗಲಿದೆ. ಜನ, ಜಾನುವಾರುಗಳಿಗೆ ನೀರು ಪೂರೈಕೆಯಾಗಲಿದೆ. ನುರಿತ ಎಂಜಿನಿಯರ್‌ಗಳ ಮಾರ್ಗದರ್ಶನದಲ್ಲಿ ಸೂಕ್ತ ವಿನ್ಯಾಸದಲ್ಲಿ ಬ್ಯಾರೇಜ್ ನಿರ್ಮಾಣಗೊಳ್ಳುತ್ತಿದೆ. ನೀರು ಸಂಗ್ರಹ ಪ್ರಮಾಣ ಕಡಿಮೆಯಾಗುತ್ತಿದೆ. ಇನ್ನೂ 2 ಅಡಿ ಎತ್ತರಿಸಬೇಕು ಎಂಬುದು ಗ್ರಾಮಸ್ಥರ ಬೇಡಿಕೆಯಾಗಿದೆ. ಈ ಬಗ್ಗೆ ಸಂಬಂಧಿಸಿದ ಎಂಜಿನಿಯರ್ ಮತ್ತು ಗುತ್ತಿಗೆದಾರರ ಬಳಿ ಚರ್ಚಿಸಿ ಹೆಚ್ಚುವರಿ ಅನುದಾನದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಂದರ್ಭದಲ್ಲಿ ಮುಖಂಡರಾದ ಸಿದ್ದಿಹಳ್ಳಿ ಪ್ರಕಾಶ್ ರೆಡ್ಡಿ, ಸಣ್ಣಸೂರಯ್ಯ, ಮಹೇಶ್ವರಪ್ಪ, ಪಲ್ಲಾಗಟ್ಟೆ ಶೇಖರಪ್ಪ, ಮಾಜಿ ಮಂಜುನಾಥ್, ಗೂಳೇಶ್, ಎಂ.ಎಸ್‌.ಪಾಟೀಲ್, ಹಟ್ಟಿ ತಿಪ್ಪೇಸ್ವಾಮಿ, ಮಾಳಮ್ಮನಹಳ್ಳಿ ವೆಂಕಟೇಶ್, ಕಾಂತರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT