ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಕೊಡಲು ಕ್ರಮ: ಸಚಿವ ರಾಮಲಿಂಗಾರೆಡ್ಡಿ

Published 3 ಫೆಬ್ರುವರಿ 2024, 10:33 IST
Last Updated 3 ಫೆಬ್ರುವರಿ 2024, 10:33 IST
ಅಕ್ಷರ ಗಾತ್ರ

ದಾವಣಗೆರೆ( ಹರ್ಡೇಕರ್ ಮಂಜಪ್ಪ ಮುಖ್ಯ ವೇದಿಕೆ): ಗ್ರಾಮೀಣ ಮತ್ತು ಕಲ್ಯಾಣ ಕರ್ನಾಟಕದ ಪತ್ರಕರ್ತರಿಗೆ ಬಸ್ ಪಾಸ್ ಕೊಡಬೇಕು ಎಂಬುದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ರಾಜ್ಯ ಮಟ್ಟದ 38ನೇ ಪತ್ರಕರ್ತರ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಆಗುತ್ತಿರುವ ತಪ್ಪುಗಳನ್ನು ಎತ್ತಿ ತೋರಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಗ್ರಾಮೀಣ ಬಸ್ ಪಾಸ್ ನೀಡುವಂತೆ ಮನವಿ ಮಾಡಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT