ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೊನ್ನಾಳಿ: ಸಂಘದ ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ತೀರ್ಮಾನ  

ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ವಾರ್ಷಿಕ ಮಹಾಸಭೆ
Published : 21 ಸೆಪ್ಟೆಂಬರ್ 2024, 15:34 IST
Last Updated : 21 ಸೆಪ್ಟೆಂಬರ್ 2024, 15:34 IST
ಫಾಲೋ ಮಾಡಿ
Comments

ಹೊನ್ನಾಳಿ: ‘ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿ ತುಮ್ಮಿನಕಟ್ಟೆ ರಸ್ತೆಯಲ್ಲಿರುವ ಸಂಘದ ಪುರಾತನ ಕಟ್ಟಡಗಳನ್ನು ತೆರವುಗೊಳಿಸಿ ನೂತನ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲು ಸಂಘದ ಸರ್ವ ಸದಸ್ಯರ ಸಹಕಾರ ಅಗತ್ಯ ಇದೆ’ ಎಂದು ಸಂಘದ ನಿರ್ದೇಶಕ, ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.

ಶನಿವಾರ ಸಂಘದ ಆವರಣದಲ್ಲಿ ಹಮ್ಮಿಕೊಂಡಿದ್ದ 2023– 24ನೆ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.

‘ತುಮ್ಮಿನಕಟ್ಟೆ ರಸ್ತೆ ವಿಸ್ತರಣೆ ಕಾರ್ಯ ಚಾಲ್ತಿಯಲ್ಲಿದೆ. ಈ ಭಾಗದ ಕಟ್ಟಡಗಳ ಮಾಲೀಕರು ತಮ್ಮ ಕಟ್ಟಡಗಳನ್ನು ತೆರವುಗೊಳಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಕಟ್ಟಡಗಳನ್ನು ತೆರವುಗೊಳಿಸಿ ಅಲ್ಲಿ ಲಭ್ಯವಾಗುವ 3000 ಅಡಿ ಜಾಗದಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ನೀಲಿ ನಕ್ಷೆ ತಯಾರಿಸಲು ಮುಂದಾಗಬೇಕಿದೆ’ ಎಂದು ಹೇಳಿದರು.

‘ರಸ್ತೆ ವಿಸ್ತರಣೆಯಿಂದ ನಮ್ಮ ಕಟ್ಟಡಕ್ಕೆ ಪರಿಹಾರದ ಮೊತ್ತವಾಗಿ ₹ 32 ಲಕ್ಷ ಲಭ್ಯವಿದೆ. ನಬಾರ್ಡ್‌ನಿಂದ ₹ 50 ಲಕ್ಷ ಸಾಲ ಪಡೆದು, ಇತರ ಬಾಬುಗಳಿಂದ ಹಣ ಸಂಗ್ರಹಿಸಿ ಉತ್ತಮವಾದ ಬಹುಮಹಡಿ ಕಟ್ಟಡ ನಿರ್ಮಾಣ ಮಾಡಬೇಕಿದೆ’ ಎಂದರು.

ಸಂಘದ ಅಧ್ಯಕ್ಷ ಎಚ್.ಬಸವರಾಜ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಪಾಧ್ಯಕ್ಷ ಎಚ್.ಡಿ.ಬಸವರಾಜಪ್ಪ, ನಿರ್ದೇಶಕರಾದ ಎಂ.ಎಚ್.ಗಜೇಂದ್ರಪ್ಪ, ಡಿ.ಮಂಜುನಾಥ, ಎಚ್.ಪಿ.ಶೇಖರಪ್ಪ, ಎಚ್.ಜಿ.ಶಂಕರಮೂರ್ತಿ, ಕೆ.ಬಿ.ಸಿದ್ದನಗೌಡ, ಎಲ್.ಎಸ್.ಅನಂತನಾಯ್ಕ, ಎಂ.ಜಿ.ಹಾಲಪ್ಪ, ಕೆ.ಚೇತನ್, ಎಚ್.ಸಿ.ಪ್ರಕಾಶ್, ನಾಗಮ್ಮ, ಬಸಮ್ಮ, ಸಂಘದ ಮುಖ್ಯ ಕಾರ್ಯನಿರ್ವಾಹಕ ಜಿ.ಇ.ಮರುಗೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT