ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಭಾ ಮಲ್ಲಿಕಾರ್ಜುನ್‌ಗೆ ಅಹಿಂದ ಪ್ರಜಾ ಶಕ್ತಿ ಬೆಂಬಲ

Published 23 ಏಪ್ರಿಲ್ 2024, 5:26 IST
Last Updated 23 ಏಪ್ರಿಲ್ 2024, 5:26 IST
ಅಕ್ಷರ ಗಾತ್ರ

ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಅಹಿಂದ ಪ್ರಜಾ ಶಕ್ತಿ ಬೆಂಬಲ ಸೂಚಿಸಲಿದೆ ಎಂದು ಸಂಘಟನೆಯ ಗೌರವ ಅಧ್ಯಕ್ಷ ಸೈಯ್ಯದ್ ಸೈಫುಲ್ಲಾ ಹೇಳಿದರು.

‘ಏ.21ರಂದು ನಡೆದ ಸಂಘಟನೆಯ ಅಧ್ಯಕ್ಷ ಜಿ.ಗೋವಿಂದರಾಜ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಅಹಿಂದ ಸಮ್ಮೇಳನ ನಡೆದಿದ್ದು, ಅಭೂತಪೂರ್ವ ಬೆಂಬಲ ದೊರೆತಿದೆ. ದಾವಣಗೆರೆಯಲ್ಲಿ ಬಿಜೆಪಿ ಕಾಂಗ್ರೆಸ್‌ ನಡುವೆ ನೇರ ಹಣಾಹಣಿ ನಡೆಯಲಿದ್ದು, ಕಾಂಗ್ರೆಸ್ ಹೊರತುಪಡಿಸಿ ಬೇರೆ ಯಾರನ್ನೂ ಬೆಂಬಲಿಸುವುದಿಲ್ಲ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ದೇಶ ಉಳಿಯಬೇಕಾದರೆ ಬಿಜೆಪಿ ಅಧಿಕಾರದಿಂದ ತೊಲಗಬೇಕು. ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಬೇಕು ಎಂಬುದು ನಮ್ಮ ಉದ್ದೇಶ. ಅನೇಕರು ಕಾಂಗ್ರೆಸ್ ಅನ್ನು ಬೆಂಬಲಿಸುತ್ತಿದ್ದು, ಕಾಂಗ್ರೆಸ್ ಬೆಂಬಲಿಸಲು ಕಟಿಬದ್ಧರಾಗಿದ್ದೇವೆ’ ಎಂದು ಹೇಳಿದರು.

‘ಬಿಜೆಪಿ ನೀಡುತ್ತಿರುವ ಜಾಹೀರಾತುಗಳು ಮುಸ್ಲಿಂ ಸಮುದಾಯದ ಬಗ್ಗೆ ನೇರ ದಾಳಿ ನಡೆಸುತ್ತಿವೆ. ಮುಸ್ಲಿಮರಿಗೆ ದೇಶದ ಸಂಪತ್ತನ್ನು ಹಂಚುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಹೇಳಿದ್ದು, ಈಗ ಅವರಿಗೆ ಸೋಲಿನ ಭೀತಿ ಉಂಟಾಗಿದೆ. ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದಲ್ಲಿ ಕೊಲೆ ಪ್ರಕರಣದಲ್ಲಿ ಆರೋಪಿಯನ್ನು ಗಲ್ಲಿಗೇರಿಸಲಿ. ಆದರೆ ಬಿಜೆಪಿಯವರು ಈ ‍ಪ್ರಕರಣವನ್ನು  ರಾಜಕೀಯಕ್ಕೆ ಬಳಸಿಕೊಳ್ಳುವುದು ಸರಿಯಲ್ಲ’ ಎಂದರು.

ಸಂಘಟನೆಯ ರಾಜ್ಯಾಧ್ಯಕ್ಷ ಜಿ.ಗೋವಿಂದರಾಜು, ಮುಖಂಡರಾದ ಚಮನ್‌ ಸಾಬ್, ಗಿರೀಶ್ ಎಸ್.ಎಸ್., ಕೆ.ಸಿ.ಮೊಹಮದ್, ಪ್ರವೀಣ್‌ಕುಮಾರ್ ಯಾದವ್, ಹನುಮಂತಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT