ಗುರುವಾರ , ಅಕ್ಟೋಬರ್ 21, 2021
22 °C

ಜಾತಿಗಣತಿ ವರದಿ ಜಾರಿಗಾಗಿ 29ಕ್ಕೆ ಅಹಿಂದ ಪ್ರತಿಭಟನೆ: ಸಿದ್ದರಾಮಯ್ಯ ಭಾಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಹಿಂದುಳಿದ ಜಾತಿಗಳ ಒಕ್ಕೂಟದಿಂದ ಜಾತಿಗಣತಿ ವರದಿ ಜಾರಿಗೆ ಆಗ್ರಹಿಸಿ ಸೆ.29ರಂದು ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ಪದಾಧಿಕಾರಿಗಳು, ಜಿಲ್ಲಾ ಕುರುಬ ಸಂಘ ಪದಾಧಿಕಾರಿಗಳು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ ಎಂದು ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿ ಪಿ. ರಾಜಕುಮಾರ್ ತಿಳಿಸಿದ್ದಾರೆ.

ಸೆ. 24ರಂದು‌ ಬೆಳಿಗ್ಗೆ 11.30ಕ್ಕೆ ಹರಪನಹಳ್ಳಿಯಲ್ಲಿ, ಮಧ್ಯಾಹ್ನ 2ಕ್ಕೆ ಜಗಳೂರಿನಲ್ಲಿ ‌ಹಿಂದುಳಿದ ಜಾತಿಗಳ ಮುಖಂಡರ ಸಭೆ ನಡೆಯಲಿದೆ. ಸೆ. 25ರಂದು ಬೆಳಿಗ್ಗೆ 11.30ಕ್ಕೆ ಚನ್ನಗಿರಿಯಲ್ಲಿ, ಮಧ್ಯಾಹ್ನ 2ಕ್ಕೆ ಮಾಯಕೊಂಡದಲ್ಲಿ‌ ಸಭೆ ಹಮ್ಮಿಕೊಳ್ಳಲಾಗಿದೆ. ಸೆ. 26ರಂದು ಬೆಳಿಗ್ಗೆ 11.30ಕ್ಕೆ ಹೊನ್ನಾಳಿಯಲ್ಲಿ, ಮಧ್ಯಾಹ್ನ 2ಕ್ಕೆ ಹರಿಹರದಲ್ಲಿ ಸಭೆ ನಡೆಯಲಿದೆ.

ಪ್ರತಿಭಟನೆಯ ರೂಪರೇಷೆಗಳ ಬಗ್ಗೆ ಸಭೆಗಳಲ್ಲಿ ಚರ್ಚೆ ನಡೆಯಲಿದೆ. ಜಾತಿಗಣತಿ ವರದಿ ಜಾರಿಗೊಳಿಸುವ ‌ಕುರಿತು ಅರಿವು ಮೂಡಿಸಲಾಗುವುದು ಎಂದು ರಾಜಕುಮಾರ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು