ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದಾವಣಗೆರೆ: ಪರೀಕ್ಷೆಗೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ

Published 2 ಜುಲೈ 2024, 14:02 IST
Last Updated 2 ಜುಲೈ 2024, 14:02 IST
ಅಕ್ಷರ ಗಾತ್ರ

ದಾವಣಗೆರೆ: ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಬೆಸ ಸೆಮಿಸ್ಟರ್ ಪರೀಕ್ಷೆಗಳನ್ನು ಬರೆಯಲು ದಾವಣಗೆರೆ ವಿಶ್ವವಿದ್ಯಾಲಯ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌ (ಎಐಡಿಎಸ್‌ಒ) ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಕಾರರು ವಿದ್ಯಾರ್ಥಿಗಳು ಅನುಭವಿಸುತ್ತಿರುವ ಸಮಸ್ಯೆಯ ಕುರಿತು ಗಮನ ಸೆಳೆಯುವ ಪ್ರಯತ್ನ ಮಾಡಿದರು.

‘ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಲ್ಲಿ ಕೆಲವರು ಹಿಂದಿನ ಸೆಮಿಸ್ಟರ್‌ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿದ್ದಾರೆ. ಏಕಾಏಕಿ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗಿ ಸಮಸ್ಯೆಗೆ ಸಿಲುಕಿದ್ದಾರೆ. ಮೊದಲ ಸೆಮಿಸ್ಟರ್‌ ಪರೀಕ್ಷೆ ಉತ್ತೀರ್ಣರಾಗಲು ಇವರಿಗೆ ಸಾಧ್ಯವಾಗಿಲ್ಲ. ಇಂತಹವರು ಮತ್ತೊಂದು ಪರೀಕ್ಷೆಯ ಅವಕಾಶಕ್ಕೆ ಕಾಯುತ್ತಿದ್ದಾರೆ’ ಎಂದು ಎಐಡಿಎಸ್‌ಒ ಜಿಲ್ಲಾ ಘಟಕದ ಅಧ್ಯಕ್ಷ ಪೂಜಾ ನಂದಿಹಳ್ಳಿ ಅಭಿಪ್ರಾಯಪಟ್ಟರು.

‘ಅಂತಿಮ ವರ್ಷದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗದತ್ತ ಗಮನ ಹರಿಸಲು ಪದವಿ ಪೂರ್ಣಗೊಳಿಸಬೇಕಿದೆ. ಬೆಸ ಸೆಮಿಸ್ಟರ್‌ ಅನುತ್ತೀರ್ಣರಾದವರು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ. ಮರು ಮೌಲ್ಯಮಾಪನದಲ್ಲಿ ಉಂಟಾಗಿರುವ ದೋಷಗಳನ್ನು ಸರಿಪಡಿಸಬೇಕು’ ಎಂದು ಮನವಿ ಮಾಡಿದರು.

ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಬೀಳೂರ್, ಜಿಲ್ಲಾ ಘಟಕದ ಉಪಾಧ್ಯಕ್ಷೆ ಬಿ.ಕಾವ್ಯ, ಯಶವಂತ್, ನಿಖಿಲ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT