ಬುಧವಾರ, ಆಗಸ್ಟ್ 4, 2021
28 °C

ಒಂದು ತಿಂಗಳಲ್ಲಿ ಎರಡು ಸೆಮಿಸ್ಟರ್‌ ಪರೀಕ್ಷೆ ವಿರೋಧಿಸಿ ಎಐಡಿಎಸ್‌ಒ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಒಂದು ತಿಂಗಳಲ್ಲಿ ಎರಡು ಸೆಮಿಸ್ಟರ್‌ಗಳ ಪರೀಕ್ಷೆ ಬರೆಯುವುದನ್ನು ವಿರೋಧಿಸಿ ಅಖಿಲ ಭಾರತ ಡೆಮೊಕ್ರಟಿಕ್‌ ಸ್ಟೂಡೆಂಟ್‌ ಆರ್ಗನೈಸೇಸನ್‌ (ಎಐಡಿಎಸ್‌ಒ) ನೇತೃತ್ವದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಹಾಗೂ ಫಾರ್ಮಸಿ ವಿದ್ಯಾರ್ಥಿಗಳು ಮನೆ, ಕಾಲೇಜು, ವಿಶ್ವವಿದ್ಯಾಲಯಗಳ ಎದುರಲ್ಲಿ ಬೇಡಿಕೆಗಳ ಫಲಕ ಹಿಡಿದು ಪ್ರತಿಭಟನೆ ನಡೆಸಿದರು.

ಕಳೆದ ಸೆಮಿಸ್ಟರ್‌ ಪರೀಕ್ಷೆ ನಡೆಸುವುದು ಅವೈಜ್ಞಾನಿಕ ನಿರ್ಧಾರ. ವಿದ್ಯಾರ್ಥಿಗಳ ಮೇಲೆ ವಿಪರೀತ ಹೊರೆ ಹೇರಬೇಡಿ. ಆಪ್‌ಲೈನ್‌ ತರಗತಿಗಳು ಆರಂಭವಾಗುವ ಮುನ್ನ ಎಲ್ಲ ವಿದ್ಯಾರ್ಥಿಗಳಿಗೆ ಕೊರೊನಾ ನಿರೋಧಕ ಲಸಿಕೆ ನೀಡಿ ಎಂದು ಆಗ್ರಹಿಸಲಾಯಿತು ಎಂದು ಸಂಘಟನೆಯ ಕಾರ್ಯದರ್ಶಿ ಪೂಜಾ ನಂದಿಹಳ್ಳಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು