ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸಂತ್ರಸ್ತರಿಗೆ ತುರ್ತು ಸೇವೆ ಒದಗಿಸಲು ಎಐಎಂಎಸ್‌ಎಸ್‌ ಆಗ್ರಹ

Last Updated 9 ಮೇ 2021, 5:25 IST
ಅಕ್ಷರ ಗಾತ್ರ

ದಾವಣಗೆರೆ: ಕೊರೊನಾ ಸಂತ್ರಸ್ತರಿಗೆ ಆಮ್ಲಜನಕ ಸಹಿತ ಅಗತ್ಯ ಸೇವೆಗಳು ಆಸ್ಪತ್ರೆಯಲ್ಲಿ ದೊರೆಯುತ್ತಿಲ್ಲ. ಕೂಡಲೇ ಎಲ್ಲ ಸೌಲಭ್ಯ ಒದಗಿಸಬೇಕು ಎಂದು ಆಲ್‌ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ ಆಗ್ರಹಿಸಿದೆ.

ಎಲ್ಲಾ ಆಸ್ಪತ್ರೆಗಳಿಗೂ ಉಚಿತ ಆಮ್ಲಜನಕ ವಿತರಣೆಯನ್ನು ಖಚಿತಪಡಿಸಬೇಕು. ಎಲ್ಲರಿಗೂ ಉಚಿತವಾಗಿ ಕೋವಿಡ್‌ ಪರೀಕ್ಷೆ ನಡೆಸಬೇಕು. ಉಚಿತವಾಗಿ ಲಸಿಕೆ ನೀಡಬೇಕು. ಕೋವಿಡ್ ಸೋಂಕಿತರಿಗೆ ಉಚಿತವಾಗಿ ಔಷಧ, ಚಿಕಿತ್ಸೆ ನೀಡಬೇಕು. ಆಸ್ಪತ್ರೆಗಳಲ್ಲಿ ಬೆಡ್‌ ಕೊರತೆಯಾಗದಂತೆ ನೋಡಿಕೊಳ್ಳಬೇಕು. ವೆಂಟಿಲೇಟರ್‌ ಸಹಿತ ಎಲ್ಲ ಸೌಲಭ್ಯಗಳು ಆಸ್ಪತ್ರೆಗಳಲ್ಲಿ ಇರಬೇಕು. ಅದಕ್ಕೆ ಸರಿಯಾಗಿ ವೈದ್ಯರು, ಶುಶ್ರೂಷಕರು, ಸಿಬ್ಬಂದಿ ಇರಬೇಕು ಎಂದು ಒತ್ತಾಯಿಸಿದೆ.

ಕೋವಿಡೇತರ ರೋಗಗಳಾದ ಕ್ಯಾನ್ಸರ್, ಕ್ಷಯ, ದೀರ್ಘಕಾಲದ ಮೂತ್ರಪಿಂಡದ ವೈಫಲ್ಯ, ಹೃದ್ರೋಗ ಹಾಗೂ ನರರೋಗದ ಸಮಸ್ಯೆಗೊಳಗಾದ ರೋಗಿಗಳನ್ನು ನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕೋವಿಡ್‌ 3ನೇ ಅಲೆ ಎದುರಿಸಲು ಸಿದ್ಧರಾಗಿರಬೇಕು ಎಂದು ಆನ್‌ಲೈನ್‌ ಮೂಲಕ ಸಂಘಟನೆಯಿಂದ ಪ್ರತಿಭಟನೆ ಮಾಡಿ ಒತ್ತಾಯಿಸಲಾಗಿದೆ ಎಂದು ಎಐಎಂಎಸ್‌ಎಸ್‌ ಜಿಲ್ಲಾ ಕಾರ್ಯದರ್ಶಿ ಭಾರತಿ ಜೆ. ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT