ಭಾನುವಾರ, ಸೆಪ್ಟೆಂಬರ್ 26, 2021
24 °C

ಮೈತ್ರಿ ಸರ್ಕಾರ ಸುಭದ್ರ: ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಮೈತ್ರಿ ಸರ್ಕಾರದ ಸುಭದ್ರವಾಗಿದೆ. ಯಾವುದೇ ಆತಂಕವಿಲ್ಲ ಎಂದು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.

 ಶುಕ್ರವಾರ ಖಾಸಗಿ ಕಾರ್ಯಕ್ರಮದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಡಿಮೆ ಸ್ಥಾನಗಳು ಬಂದಿರುವುದಕ್ಕೆ ಪತ್ರಿಕ್ರಿಯಿಸಿ ‘ಜನಾದೇಶಕ್ಕೆ ಎಲ್ಲರೂ ತಲೆಬಾಗಲೇಬೇಕು. ಜನರ ಆದೇಶವನ್ನು ಎಲ್ಲರೂ ಪಾಲನೆ ಮಾಡಬೇಕು. ಆದರೆ ಮೈತ್ರಿ ಸರ್ಕಾರದ ಭವಿಷ್ಯ ಇನ್ನೆರಡು ದಿನಗಳಲ್ಲಿ ಗೊತ್ತಾಗುತ್ತದೆ’ ಎಂದು ಹೇಳಿದರು.

‘ಮೈತ್ರಿ ಸರ್ಕಾರದ ಭವಿಷ್ಯ ಇನ್ನೆರಡು ದಿನಗಳಲ್ಲಿ ಗೊತ್ತಾಗುತ್ತದೆ. ಸೋಲಿಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಹೊಣೆ ಹೊರಬೇಕೆ ಎಂದು ಕೇಳಿದ ಪ್ರಶ್ನೆಗೆ ಅವರ ಬಗ್ಗೆ ಏನು ಮಾತನಾಡುವುದಿಲ್ಲ’ ಎಂದು ಜಾರಿಕೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು