ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ವ ಜನಾಂಗಕ್ಕೂ ಸ್ಫೂರ್ತಿ ಅಂಬೇಡ್ಕರ್: ಎರ್ರಿಸ್ವಾಮಿ

Published 15 ಏಪ್ರಿಲ್ 2024, 5:17 IST
Last Updated 15 ಏಪ್ರಿಲ್ 2024, 5:17 IST
ಅಕ್ಷರ ಗಾತ್ರ

ಚನ್ನಗಿರಿ: ತಮ್ಮ ಇಡೀ ಬದುಕನ್ನು ಹೋರಾಟದ ಮೂಲಕ ಕಟ್ಟಿಕೊಂಡ ಡಾ.ಬಿ.ಆರ್. ಅಂಬೇಡ್ಕರ್ ಅವರು ಸರ್ವ ಜನಾಂಗಕ್ಕೂ ಸ್ಫೂರ್ತಿ ಎಂದು ತಹಶೀಲ್ದಾರ್ ಪಿ.ಎಸ್. ಎರ್ರಿಸ್ವಾಮಿ ತಿಳಿಸಿದರು.

ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಭಾನುವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

‘ಎಲ್ಲರೂ ವಿದ್ಯಾವಂತರಾಗಿ, ಸಂಘಟಿತರಾಗಿ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಟ ನಡೆಸಬೇಕು. ಧರ್ಮ ಇರುವುದು ಮನುಷ್ಯರಿಗಾಗಿ, ಧರ್ಮಕ್ಕಾಗಿ ಮನುಷ್ಯರು ಅಲ್ಲ. ನಾನು ಸಂವಿಧಾನ ಎಂಬ ರಥವನ್ನು ಇಲ್ಲಿಯತನಕ ಎಳೆದು ತಂದು ನಿಲ್ಲಿಸಿದ್ದೇನೆ. ಸಾಧ್ಯವಾದರೆ ಅದನ್ನು ಮುಂದಕ್ಕೆ ಎಳೆಯಿರಿ. ಆದರೆ, ಯಾವುದೇ ಕಾರಣಕ್ಕೂ ಹಿಂದಕ್ಕೆ ಹೋಗಲು ಬಿಡಬೇಡಿ. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂದು ಅಂಬೇಡ್ಕರ್‌ ಹೇಳಿದ್ದರು’ ಎಂದು ಸ್ಮರಿಸಿದರು.

ತಾಲ್ಲೂಕು ಪಂಚಾಯಿತಿ ಇಒ ಬಿ.ಕೆ. ಉತ್ತಮ, ಪುರಸಭೆ ಮುಖ್ಯಾಧಿಕಾರಿ ಮೊಹಮ್ಮದ್ ವಾಸಿಮ, ತಾಲ್ಲೂಕು ವೈದ್ಯಾಧಿಕಾರಿ  ಈ. ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರುದ್ರೇಶ್, ಬಿಸಿಎಂ ಇಲಾಖೆ ಅಧಿಕಾರಿ ರವೀಂದ್ರ ಕುಮಾರ್ ಅಥರ್ಗಾ, ಬಿಇಒ ಎಲ್. ಜಯಪ್ಪ, ಡಿಎಸ್ಎಸ್ ಮುಖಂಡರಾದ ಸಿ.ಆರ್. ನಾಗೇಂದ್ರಪ್ಪ, ಆರ್. ಪ್ರಭಾಕರ್, ಆನಂದ್, ಎಚ್.ಎನ್. ಮೂರ್ತಿ, ಎಂ.ಕೆ. ನಾಗಪ್ಪ, ಕಲಾವಿದ ಕಗತೂರು ಮಲ್ಲೇಶಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT