ಮಂಗಳವಾರ, ಜನವರಿ 26, 2021
16 °C

ಕೇಂದ್ರ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ದೆಹಲಿಯಲ್ಲಿನ ರೈತರ ಹೋರಾಟ ಬೆಂಬಲಿಸಿ ಹಾಗೂ ಕೇಂದ್ರ ಸರ್ಕಾರದ ರೈತ, ಕಾರ್ಮಿಕ ನೀತಿ ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ಇಲ್ಲಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ (ಎಐಸಿಯುಸಿ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತೆಯರು ಹೋರಾಟದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬರುತ್ತಿರುವ ರೈತರನ್ನು ಪೊಲೀಸರ ಮೂಲಕ ಹತ್ತಿಕ್ಕುವ ಕೆಲಸವನ್ನು ಮಾಡುತ್ತಿರುವುದು ಖಂಡನೀಯ ಎಂದರು.

ಕೂಡಲೇ ಎಪಿಎಂಸಿ ಕಾಯ್ದೆ, ವಿದೇಶಿ ಬೀಜ ಕಾಯ್ದೆ, ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿದರು.

ಬಳಿಕ ಉಪವಿಭಾಗಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಎಐಸಿಯುಸಿ ಜಿಲ್ಲಾಧ್ಯಕ್ಷೆ ಎಂ.ಬಿ. ಶಾರದಮ್ಮ, ಪ್ರಧಾನ ಕಾರ್ಯದರ್ಶಿ ಎಸ್.ಎಸ್. ಮಲ್ಲಮ್ಮ, ಖಜಾಂಚಿ ವಿಶಾಲಾಕ್ಷಿ ಮೃತ್ಯುಂಜಯ, ರೇಣುಕಮ್ಮ, ಸಿ.ಬಿ. ಕಾಳಮ್ಮ, ಕೆ. ಸುಧಾ, ಅಂಬುಜ, ಜ್ಯೋತಿ, ರಾಧಾ, ಮಂಗಳ, ಭಾಗ್ಯಲಕ್ಷ್ಮಿ, ಅಂಜಿನಮ್ಮ  ಭಾಗವಹಿಸಿದ್ದರು.

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು