ಭಾನುವಾರ, ಫೆಬ್ರವರಿ 23, 2020
19 °C

23ರಂದು ಅಂಗನವಾಡಿ ನೌಕರರ ಬೆಂಗಳೂರು ಚಲೋ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ನೌಕರರಿಂದ ಜ.23, 24ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್‌ ರಾಜ್ಯಾಧ್ಯಕ್ಷ ಎಚ್‌.ಕೆ. ರಾಮಚಂದ್ರಪ್ಪ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ಮೆರವಣಿಗೆ ಹೊರಟು ಫ್ರೀಡಂ ಪಾರ್ಕಿನಲ್ಲಿ ಧರಣಿ ನಡೆಯಲಿದೆ. ಎರಡು ದಿನಗಳು ಅಹೋರಾತ್ರಿ ಧರಣಿ ನಡೆಯಲಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ರಾಜ್ಯದಲ್ಲಿ 1.30 ಲಕ್ಷ , ಜಿಲ್ಲೆಯಲ್ಲಿ 3446 ಜನ ನೌಕರರು ಇದ್ದಾರೆ. ಮೂರು ತಿಂಗಳಿನಿಂದ ವೇತನ, ಮೊಟ್ಟೆ ಪೂರೈಕೆಯ ಹಣ ನೀಡಿಲ್ಲ. ಇದರಿಂದ ನೌಕರರ ಜೀವನ ನಿರ್ವಹಣೆ ಕಷ್ಟವಾಗಿದೆ. 45 ವರ್ಷಗಳಿಂದ ಗೌರವಧನದ ಆಧಾರದಲ್ಲಿ ದುಡಿಯುತ್ತಿದ್ದು, ಕಾಯಂ ಕಾರ್ಮಿಕರೆಂದು ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಅಂಗನವಾಡಿ ಕೇಂದ್ರಗಳಲ್ಲೇ ಕಾನ್ವೆಂಟ್‌ ತೆರೆಯಬೇಕು. ನಿವೃತ್ತಿಯಾದವರಿಗೆ ಕನಿಷ್ಠ ₹5 ಸಾವಿರ ಪಿಂಚಣಿ ನೀಡಬೇಕು. ಸೇವಾ ಹಿರಿತನದ ಮೇಲೆ ಗೌರವಧನ ಹೆಚ್ಚಳ ಮಾಡಬೇಕು. ತೀವ್ರ ಕಾಯಿಲೆ ಬಿದ್ದಾಗ ಉಚಿತ ಚಿಕಿತ್ಸೆ, ವೇತನ ಸಹಿತ ರಜೆ ನೀಡಬೇಕು. ₹21 ಸಾವಿರ ಕನಿಷ್ಠ ವೇತನ ನಿಗದಿಪಡಿಸಬೇಕು. ಇಎಸ್‌ಐ, ಭವಿಷ್ಯ ನಿಧಿ, ಗ್ರ್ಯಾಚುಟಿ ನೀಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗುವುದು ಎಂದು ವಿವರಿಸಿದರು.

ಧರಣಿಯಲ್ಲಿ ಪಾಲ್ಗೊಳ್ಳುವವರು ಊಟ ವ್ಯವಸ್ಥೆ ಮಾಡಿಕೊಂಡು ಬರಬೇಕು ಎಂದು ಮನವಿ ಮಾಡಿದರು.

ಫೆಡರೇಷನ್‌ನ ಜಿಲ್ಲಾ ಘಟಕದ ಅಧ್ಯಕ್ಷೆ ಎಂ.ಬಿ. ಶಾರದಮ್ಮ, ವಿಶಾಲಾಕ್ಷಿ, ಎಸ್‌.ಎಸ್. ಮಲ್ಲಮ್ಮ, ರೇಣುಕಮ್ಮ, ಸುಧಾ, ಸಿ.ಟಿ. ಕಾಳಮ್ಮ, ಆವರಗೆರೆ ವಾಸು, ಆವರಗೆರೆ ಚಂದ್ರು, ಎನ್‌.ಎಚ್‌. ರಾಮಪ್ಪ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು