ಮಂಗಳವಾರ, ಜನವರಿ 31, 2023
18 °C

ಆಂಜನೇಯ ಸ್ವಾಮಿ ತೆಪ್ಪೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಲೇಬೆನ್ನೂರು: ಸಮೀಪದ ಹಿಂಡಸಗಟ್ಟೆ ಗ್ರಾಮದಲ್ಲಿ ಕಡೇ ಕಾರ್ತಿಕೋತ್ಸವದ ಪ್ರಯುಕ್ತ ಶನಿವಾರ ತಡರಾತ್ರಿ ಕೊಕ್ಕನೂರು ಆಂಜನೇಯ ಸ್ವಾಮಿ ಹಾಗೂ ಸಿದ್ದೇಶ್ವರ ಸ್ವಾಮಿ ತೆಪ್ಪೋತ್ಸವ ಅದ್ಧೂರಿಯಾಗಿ ನಡೆಯಿತು.

ಉತ್ಸವಕ್ಕೂ ಮುನ್ನ ಮಂಗಳವಾದ್ಯ, ಭಜನೆ, ಡೊಳ್ಳು ಕುಣಿತ, ತಮಟೆ ಸೇರಿದಂತೆ ಜಾನಪದ ಕಲಾತಂಡಗಳೊಂದಿಗೆ ಉತ್ಸವಮೂರ್ತಿ ಮೆರವಣಿಗೆ ನಡೆಸಲಾಯಿತು.

ಮುಖ್ಯಬೀದಿಯನ್ನು ತಳಿರು ತೋರಣ, ವಿದ್ಯುತ್ ದೀಪಗಳಿಂದ ಶೃಂಗರಿಸಲಾಗಿತ್ತು. ನಂದಿಗುಡಿ ವೃಷಭಪುರಿ ಸಂಸ್ಥಾನದ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಪೂಜಾ ಕಾರ್ಯ ನೆರವೇರಿಸಿದರು.

ಭಕ್ತರು ದೀಪ ಬೆಳಗಿಸಿ ಕಲ್ಯಾಣಿ ಯಲ್ಲಿ ತೇಲಿ ಬಿಟ್ಟರು. ಸುತ್ತಮುತ್ತಲ ಗ್ರಾಮಸ್ಥರು  ಸೇರಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು