ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಇಟ್ಟಿಗೆ ಗ್ರಾಮದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

Published 7 ಜೂನ್ 2024, 5:07 IST
Last Updated 7 ಜೂನ್ 2024, 5:07 IST
ಅಕ್ಷರ ಗಾತ್ರ

ಇಟ್ಟಿಗೆ(ಚನ್ನಗಿರಿ): ‘ಮಾನವ ಆಧುನಿಕ ಬದುಕಿಗೆ ಮಾರುಹೋಗಿ ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಪರಿಸರ ಉಳಿವಿಗಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯದಲ್ಲಿ ದಶ ಲಕ್ಷ ಸಸಿಗಳನ್ನು ನೆಡುವ ಗುರಿ ಹೊಂದಲಾಗಿದೆ. ಪರಿಸರ ಉಳಿಸಿ, ಬೆಳೆಸುವುದು ನಮ್ಮೆಲ್ಲರ ಹೊಣೆಯಾಗಿದೆ’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಮೇಲ್ವಿಚಾರಕ ಕೆ. ಹನುಮಂತಪ್ಪ ತಿಳಿಸಿದರು.

ತಾಲ್ಲೂಕಿನ ಇಟ್ಟಿಗೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಸ್ಥೆಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮುಂದಿನ ದಿನಗಳಲ್ಲಿ ತಾಲ್ಲೂಕಿನ 15 ಗ್ರಾಮಗಳಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಧರ್ಮಸ್ಥಳ ಸಂಸ್ಥೆಯಿಂದ ನಡೆಸಲಾಗುವುದು. ಮಾನವನ ದುರಾಸೆಯಿಂದ ಗಾಳಿ, ನೀರು, ಮಣ್ಣು ಕಲುಷಿತಗೊಳ್ಳುತ್ತಿದೆ. ಪರಿಸರ ಇಲ್ಲದೇ ಬದುಕುವುದು ಸಂಪೂರ್ಣ ಅಸಾಧ್ಯ ಎಂದರು.

ಮುಖ್ಯಶಿಕ್ಷಕ ಕರಿಸಿದ್ದಪ್ಪ, ಧರ್ಮಸ್ಥಳ ಯೋಜನೆ ಮೇಲ್ವಿಚಾರಕ ನವೀನ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಲಿಂಗರಾಜು, ಪದ್ಮಮ್ಮ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಕಾವ್ಯ ಬಸವರಾಜ್, ನಾಗರಾಜ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT