ಬುಧವಾರ, ಸೆಪ್ಟೆಂಬರ್ 22, 2021
21 °C

ಅರ್ಧ ಹೆಲ್ಮೆಟ್‌ಗೆ ದಂಡ ವಿಧಿಸದಂತೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಕೊರೊನಾ ಸಂಕಷ್ಟ ಕಾಲದಲ್ಲಿ ಫುಲ್‌ ಹೆಲ್ಮೆಟ್‌ ಖರೀದಿಸುವುದು ಕಷ್ಟ. ಅದಕ್ಕಾಗಿ ಇನ್ನು ಆರು ತಿಂಗಳ ಕಾಲ ಫುಲ್‌ ಹೆಲ್ಮೆಟ್‌ ನಿಯಮ ಕಡ್ಡಾಯ ಮಾಡಬಾರದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌ ಅವರಿಗೆ ಕಾಂಗ್ರೆಸ್‌ ಮನವಿ ಮಾಡಿದೆ.

ಐಎಸ್‌ಐ ಮಾರ್ಕ್‌ ಇರುವ ಹೆಲ್ಮೆಟ್‌ ಕಡ್ಡಾಯ ಕೂಡಲೇ ಮಾಡಬಾರದು. ಜತೆಗೆ ಆಟೋದಲ್ಲಿ ಮೀಟರ್‌ ಅಳವಡಿಸಲು ಕೂಡ ಆರು ತಿಂಗಳು ಸಮಯಾವಕಾಶ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದರು.

ಅರ್ಧ ಹೆಲ್ಮೆಟ್‌ಗೆ ಸದ್ಯ ದಂಡ ವಿಧಿಸುವುದಿಲ್ಲ. ಆದರೆ ಅರ್ಧ ಹೆಲ್ಮೆಟ್‌ ಮಾರಾಟವನ್ನು ನಿರ್ಬಂಧಿಸಲಾಗುವುದು ಎಂದು ಎಸ್‌ಪಿ ಭರವಸೆ ನೀಡಿದರು.

ಪಾಲಿಕೆ ವಿರೋಧ ಪಕ್ಷದ ನಾಯಕ ಎ. ನಾಗರಾಜ್‌, ಸದಸ್ಯರಾದ ಗಡಿಗುಡಾಳ್‌ ಮಂಜುನಾಥ್‌, ಕೆ.ಚಮನ್‌ಸಾಬ್‌ ಅವರೂ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.