ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಡಪಾಲು ವಿತರಣೆಗೆ ಅರ್ಜಿ: 26 ಕೊನೆಯ ದಿನ

Published 24 ಮೇ 2023, 13:54 IST
Last Updated 24 ಮೇ 2023, 13:54 IST
ಅಕ್ಷರ ಗಾತ್ರ

ಹೊನ್ನಾಳಿ: ತಾಲ್ಲೂಕಿನಲ್ಲಿ ಕೃಷಿ ಸಂಸ್ಕರಣೆ ಯೋಜನೆಯ ಅಡಿಯಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ 50ರ ರಿಯಾಯತಿ ದರದಲ್ಲಿ ತಾಡಪಾಲುಗಳನ್ನು ವಿತರಿಸಲಾಗುವುದು. ಇದುವರೆಗೂ ತಾಡಪಾಲಿಗೆ ಅರ್ಜಿ ಸಲ್ಲಿಸದ ರೈತರು ತಮ್ಮ ಭಾಗದ ರೈತ ಸಂಪರ್ಕ ಕೇಂದ್ರದಲ್ಲಿ ಮಾರ್ಚ್ 26 ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರಾದ ಎ.ಎಸ್. ಪ್ರತಿಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ ಸಾಲಿನಲ್ಲಿ ಅರ್ಜಿ ಸಲ್ಲಿಸಿ ತಾಡಪಾಲು ಪಡೆದ ರೈತರು ಅರ್ಜಿ ಸಲ್ಲಿಸುವಂತಿಲ್ಲ. ಕಳೆದ ಸಾಲಿನಲ್ಲಿ ಅರ್ಜಿ ಸಲ್ಲಿಸಿ ತಾಡಪಾಲು ದೊರೆಯದ ರೈತರ ಹಳೆಯ ಅರ್ಜಿಗಳನ್ನೇ ಮಾನ್ಯ ಮಾಡಿ ಅವರಿಗೆ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್‌ ಜೆರಾಕ್ಸ್ ಪ್ರತಿಯನ್ನು ನೀಡಲು ಕೋರಲಾಗಿದೆ. ನಿಗದಿಪಡಿಸಿದ ಗುರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಬಂದರೆ ಲಾಟರಿ ಮೂಲಕ ಆಯಾ ರೈತ ಸಂಪರ್ಕ ಕೇಂದ್ರದಲ್ಲಿ ರೈತರನ್ನು ಆಯ್ಕೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT