ಸೋಮವಾರ, ಜನವರಿ 17, 2022
18 °C

ಅಡಿಕೆ ಕಳವು: 8 ಜನರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊನ್ನಾಳಿ:  ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ಒಂದು ವಾರದ ಹಿಂದೆ ಗ್ರಾಮದ ಆಂಜನೇಯ ಎಂಬುವವರ ಅಡಿಕೆ ತೋಟದಲ್ಲಿ ಕಳವು ಮಾಡಿದ ಪ್ರಕರಣ ಸಂಬಂಧ 8 ಜನರನ್ನು ಬಂಧಿಸಲಾಗಿದೆ. ಆರೋಪಿ ಪರಮೇಶ್ವರಪ್ಪ ಎಂಬುವವರ ಬಂಧನಕ್ಕೆ ಬಲೆ ಬೀಸಿದ್ದು, ಶೀಘ್ರಆತನನ್ನು ಪತ್ತೆ ಹಚ್ಚಲಾಗುವುದು ಎಂದು ಸಿಪಿಐ ದೇವರಾಜ್ ತಿಳಿಸಿದ್ದಾರೆ.

ಬಂಧಿತರಿಂದ 8 ಕ್ವಿಂಟಲ್ ಅಡಿಕೆ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ತಾಲ್ಲೂಕಿನ ಕುಂದೂರು, ಮಲೇಕುಂಬಳೂರು ಹಾಗೂ ನೆಲಹೊನ್ನೆ ಗ್ರಾಮದವರಾಗಿದ್ದು, ತನಿಖೆ ಮುಂದುವರಿದಿದೆ ಎಂದು ಸಿಪಿಐ ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು