ಬುಧವಾರ, ಆಗಸ್ಟ್ 10, 2022
24 °C

ದಾವಣಗೆರೆ | ವಿವಾದಾತ್ಮಕ ಪೋಸ್ಟ್ ಹಾಕಿದರೆ ಬಂಧನ: ಎಸ್‌ಪಿ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಇಲ್ಲವೇ ಅವಹೇಳನಕಾರಿ ಪೋಸ್ಟ್ ಹಾಕಿದರೆ ಅಂತಹವರನ್ನು ಮುಲಾಜಿಲ್ಲದೇ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಎಚ್ಚರಿಕೆ ನೀಡಿದ್ದಾರೆ.

ಉದಯಪುರದಲ್ಲಿ ಟೈಲರ್ ವೃತ್ತಿಯ ಕನ್ಹಯ್ಯಲಾಲ್ ಹತ್ಯೆ ಸಂಬಂಧ ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾತನಾಡಿದ ಅವರು, ‘ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾವಹಿಸಿದ್ದು, ಪ್ರಕರಣ ಸಂಬಂಧ ವಾಟ್ಸ್‌ಆ್ಯಪ್, ಫೇಸ್‌ಬುಕ್‌ಗಳಲ್ಲಿ ಯಾವುದಕ್ಕೂ ಪ್ರತಿಕ್ರಿಯೆ ನೀಡಬಾರದು. ಡಿಪಿಗಳಿಗೆ ಸ್ಟೇಟಸ್ ಹಾಕಬಾರದು’ ಎಂದು ಎಚ್ಚರಿಕೆ ನೀಡಿದ್ದಾರೆ.

‘ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದು, ಕೋಮುವಾದಿ ಚಟುವಟಿಕೆಗೆ ಪ್ರಚೋದಿಸುವವರಿಗೆ ಎಚ್ಚರಿಕೆ ನೀಡಿದ್ದೇವೆ. ಕಾನೂನು ಸುವ್ಯವಸ್ಥೆಗೆ ಭಂಗ ತರುವ ಕೆಲಸ ಮಾಡಿದವರಿಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಏನೇ ಇದ್ದರೂ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಗಮನಕ್ಕೆ ತರಬೇಕು’ ಎಂದು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಮನವಿ ಕೊಟ್ಟು ಹೋಗಬಹುದು. ರ‍್ಯಾಲಿ, ಮೆರವಣಿಗೆಗೆ ಅವಕಾಶವಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು