ಮಂಗಳವಾರ, ಜೂನ್ 15, 2021
24 °C

ಎಆರ್‌ಎಸ್‌ಐ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಅಸ್ತಮಾದಿಂದ ಬಳಲುತ್ತಿದ್ದ ಡಿಎಆರ್‌ನ ಎಆರ್‌ಎಸ್ಐ (ಅಸಿಸ್ಟೆಂಟ್‌ ಆರ್ಮ್ಡ್ ಸಬ್‌ ಇನ್‌ಸ್ಪೆಕ್ಟರ್‌) ಎ. ಪರಶುರಾಮ (48) ಉಸಿರಾಟದ ಸಮಸ್ಯೆಯಿಂದ ಮಂಗಳವಾರ ಬಾಪೂಜಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಹರಪನಹಳ್ಳಿ ತಾಲ್ಲೂಕಿನ ಓಬನಹಳ್ಳಿ ಅವರು ಈಚೆಗೆ ಆಸ್ತಮಾದಿಂದ ಬಳಲುತ್ತಿದ್ದರು. ಹಾಗಾಗಿ ರಜೆಯಲ್ಲಿದ್ದರು. ಸೋಮವಾರ ಉಸಿರಾಟದ ಸಮಸ್ಯೆ ತೀವ್ರಗೊಂಡ ಕಾರಣ ಬಾಪೂಜಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾಕ್ಕೆ ಸಂಬಂಧಿಸಿದಂತೆ ಆರ್‌ಟಿ–ಪಿಸಿಆರ್‌ ಪರೀಕ್ಷೆ ಮಾಡಿದಾಗ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಡಿಎಆರ್‌ ಡಿವೈಎಸ್‌ಪಿ ಪ್ರಕಾಶ್‌ ತಿಳಿಸಿದ್ದಾರೆ.

1996ರಲ್ಲಿ ಪೊಲೀಸ್‌ ಇಲಾಖೆಗೆ ಸೇರಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.