ಬುಧವಾರ, ಫೆಬ್ರವರಿ 26, 2020
19 °C

ಕಲಾವಿದನಿಂದ ಸಾಮಾಜಿಕ ಮಾಧ್ಯಮದ ಮೂಲಕ ಮತದಾನ ಜಾಗೃತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ:  ದಾವಣಗೆರೆ ಸ್ಮಾರ್ಟ್ ಸಿಟಿಯಾಗುತ್ತಿದೆ. ಆದ್ದರಿಂದ ಸ್ಮಾರ್ಟ್ ಆಗಿರುವ ಅಭ್ಯರ್ಥಿಗಳನ್ನು ಗೆಲ್ಲಿಸಿ.

ದಾವಣಗೆರೆಯ ಕಲಾವಿದ ಆರ್.ಟಿ. ಅರುಣ್ ಕುಮಾರ್ ಅವರು ಮತದಾನ ಕುರಿತು ಜಾಗೃತಿ ಮೂಡಿಸುವ ವಿಡಿಯೊವನ್ನು ಸ್ನೇಹಿತರಿಗೆ ಹಲವು ವಾಟ್ಸ್ ಆ್ಯಪ್ ಗ್ರೂಪ್ ಗಳಿಗೆ ಶೇರ್ ಮಾಡಿದ್ದಾರೆ.

ನಗರ ಪ್ರದೇಶಗಳಲ್ಲಿ ಮತದಾನ ಕಡಿಮೆಯಾಗುತ್ತಿದೆ. ಸಾಮಾಜಿಕ ಮಾಧ್ಯಮ ಜನರಿಗೆ ಬಹಳ ಬೇಗ ತಲುಪುವುದರಿಂದ ಮತದಾರರಿಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅರುಣ್ ಕುಮಾರ್ ಹೇಳುತ್ತಾರೆ.

ವ್ಯವಸ್ಥೆ ಸರಿಯಿಲ್ಲ ಎಂದು ಜನರು ದೂರುವ ಬದಲು ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು.  ಮತದಾನದ ಬಗ್ಗೆ ಜಾಗೃತಿ ಮೂಡಿಸಲು 'ಮತದಾನ ಜಾಗೃತ ವೇದಿಕೆ'ಯನ್ನು ಆರಂಭಿಸಿದ್ದೇವೆ. ಎರಡು ವರ್ಷಗಳಿಂದ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು