ಉಚ್ಚಂಗಿದುರ್ಗ: ಸಮೀಪದ ಕಮ್ಮತ್ತಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯರಬಳ್ಳಿ ಗ್ರಾಮದ ಆಶಾ ಕಾರ್ಯಕರ್ತೆ ಚೆನ್ನಮ್ಮ (39) ಬುಧವಾರ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.

ಕೆಲ ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ ಚೆನ್ನಮ್ಮ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಮೃತಪಟ್ಟಿದ್ದಾರೆ.

ತೌಡೂರು ಗ್ರಾಮ ಪಂಚಾಯಿತಿ ಟಾಸ್ಕ್ಫೋರ್ಸ್ ಸಮಿತಿ ಸದಸ್ಯೆಯಾಗಿ ಗ್ರಾಮದಲ್ಲಿ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು.

ಅವರಿಗೆ ಪತಿ, ಪುತ್ರ, ಪುತ್ರಿ ಇದ್ದಾರೆ. ಅಂತ್ಯಕ್ರಿಯೆಯನ್ನು ಗ್ರಾಮದ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.