ದಾವಣಗೆರೆ: ತಿಂಗಳಿಗೆ ₹12 ಸಾವಿರ ಗೌರವಧನ ನೀಡಬೇಕು ಎಂದು ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಮಹಾನಗರಪಾಲಿಕೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಎಐಯುಟಿಯುಸಿ ನೇತೃತ್ವದಲ್ಲಿ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರು ಆಯಾ ಗ್ರಾಮ ಜಿಲ್ಲೆ, ತಾಲ್ಲೂಕು, ಪಟ್ಟಣ ಹಾಗೂ ಗ್ರಾಮ ಪಂಚಾಯಿತಿಗಳ ಎದುರು ಪ್ರತಿಭಟನೆ ನಡೆಸಿದ್ದು, ಅದರಂತೆ ನಗರದಲ್ಲಿ ಪಾಲಿಕೆ ಎದುರು ಪ್ರತಿಭಟನೆ ನಡೆಸಿ ಮೇಯರ್ ಬಿ.ಜಿ.ಅಜಯ್ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

‘ನಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ನಿರಂತರ ಹೋರಾಟ ಮಾಡುತ್ತಿದ್ದೆವೆ. ಇಲ್ಲಿಯವರೆಗೆ ಆಶಾ ಸಂಘದಿಂದ ರಾಜ್ಯವ್ಯಾಪಿ ಹೋರಾಟಗಳು ನಡೆದಿವೆ. ಆದರೆ ರಾಜ್ಯಸರ್ಕಾರ ನಿರ್ಲಕ್ಷ್ಯ ಮತ್ತು ಜನವಿರೋಧಿ ಧೋರಣೆ ಅನುಸರಿಸುತ್ತಿದೆ. ಕೊರೊನಾ ವಾರಿಯರ್ಸ್ಗಳ ನ್ಯಾಯಯುತ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳು ಸ್ಪಂದಿಸಬೇಕು. ಈ ಮೂಲಕ ಜನಪರ ಆರೋಗ್ಯದ ಕಾಳಜಿಯನ್ನು ತೋರಿಸಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ತಿಪ್ಪೇಸ್ವಾಮಿ ಅಣಬೇರು, ಎ. ನಾಗರತ್ನ, ಶಕುಂತಲಾ, ರುಕ್ಕಮ್ಮ, ಮಹಾದೇವಿ, ರೇಖಾ, ಲಕ್ಷ್ಮೀಬಾಯಿ, ಭಾರತಿ, ಪುಷ್ಪ, ಶೀಲಾ, ಸರ್ಮಮಂಗಳಾ, ನಾಗವೇಣಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.