ಸೋಮವಾರ, ಸೆಪ್ಟೆಂಬರ್ 27, 2021
22 °C

ದಾವಣಗೆರೆ: ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಕೊರೊನಾ ವಾರಿಯರ್‌ಗಳಾಗಿರುವ ಆಶಾ ಕಾರ್ಯಕರ್ತೆಯರಿಗೆ ವೇತನ ಹೆಚ್ಚಳ ಮಾಡಲಾಗುವುದು ಎಂದು ಎರಡು ತಿಂಗಳ ಹಿಂದೆ ಭರವಸೆ ನೀಡಿರುವ ಸರ್ಕಾರ ಭರವಸೆಯನ್ನು ಈಡೇರಿಸಿಲ್ಲ ಎಂದು ಆರೋಪಿಸಿ ಎಐಯುಟಿಯುಸಿ ನೇತೃತ್ವದಲ್ಲಿ ಆಶಾ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.

ರಾಜ್ಯದ 42 ಸಾವಿರ ಆಶಾ ಕಾರ್ಯಕರ್ತೆಯರು 20 ದಿನಗಳ ನಿರಂತರ ಹೋರಾಟ ಮಾಡಿದ ಬಳಿಕ ಸರ್ಕಾರ ಭರವಸೆ ನೀಡಿತ್ತು. ಕೊಟ್ಟ ಮಾತಿಗೆ ತಪ್ಪದೇ ಕೂಡಲೇ ಭರವಸೆ ಈಡೇರಿಸಬೇಕು. ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಸಂಬಳ ₹ 12 ಸಾವಿರ ನೀಡಬೇಕು. ಬಾಕಿ ಇರುವ ಪ್ರೋತ್ಸಾಹಧನ ಒದಗಿಸಬೇಕು.  ಕೋವಿಡ್‌ ಪ್ರೋತ್ಸಾಹಧನ ತಲುಪದವರಿಗೆ ತಲುಪಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಬಳಿಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷ ತಿಪ್ಪೇಸ್ವಾಮಿ ಅಣಬೇರು, ಕಾರ್ಯದರ್ಶಿ ನಾಗವೇಣಿ ಹಿರೇಮಳಲಿ ಅವರೂ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು