ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹12 ಸಾವಿರ ಗೌರವ ಧನಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Last Updated 30 ಜೂನ್ 2020, 15:50 IST
ಅಕ್ಷರ ಗಾತ್ರ

ದಾವಣಗೆರೆ: ಆಶಾ ಕಾರ್ಯಕರ್ತೆಯರಿಗೆ ₹12 ಸಾವಿರ ಮಾಸಿಕ ಗೌರವಧನ ಖಾತರಿಪಡಿಸಬೇಕು ಹಾಗೂ ಅಗತ್ಯವಿರುವಷ್ಟು ಆರೋಗ್ಯ ರಕ್ಷಣಾ ಸಾಮಗ್ರಿಗಳನ್ನು ನೀಡಬೇಕು ಎಂದು ಆಗ್ರಹಿಸಿಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಮೇಲಿಂದ ಮೇಲೆ ಎಲ್ಲಾ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ ಮಾಡಬೇಕು. ಪಾಸಿಟಿವ್ ಬಂದಿರುವ ಎಲ್ಲರಿಗೂ ಸಂಪೂರ್ಣ ಉಚಿತ ಚಿಕಿತ್ಸೆ ನೀಡಬೇಕು ಮತ್ತು ಚಿಕಿತ್ಸೆಯ ಅವಧಿಯಲ್ಲಿ ಸಂಪೂರ್ಣ ಗೌರವಧನ ನೀಡಬೇಕು. ಮಾಸ್ಕ್, ಹ್ಯಾಂಡ್‌ಗ್ಲೌಸ್‌, ಫೇಸ್‍ಶೀಲ್ಡ್‌ ಹಾಗೂ ಸ್ಯಾನಿಟೈಸರ್‌ಗಳನ್ನು ಸಮರ್ಪಕವಾಗಿ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಮಾರ್ಚ್‌ ತಿಂಗಳಿನಿಂದ ಹಲವು ಬಾರಿ ರಾಜ್ಯ ವ್ಯಾಪ್ತಿಯಲ್ಲಿ ಹೋರಾಟ ಮಾಡಿ 10 ಬಾರಿ ಮನವಿ ಸಲ್ಲಿಸಿದ್ದರೂ ಸಮಸ್ಯೆ ಪರಿಹಾರವಾಗಿಲ್ಲ‌‌. ಹಿಂದಿನ ಸಮಸ್ಯೆಗಳ ಜೊತೆಗೆ ಕೋವಿಡ್‌ ಸಂಬಂಧಿಸಿದಂತೆ ಇನ್ನಷ್ಟು ಸಮಸ್ಯೆಗಳು ಸೇರಿ ಕಾರ್ಯಕರ್ತೆಯರ ಬದುಕು ಅಸಹನೀಯವಾಗಿದೆ.‌ ಆದ್ದರಿಂದ ಮತ್ತೆ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾಗಿದೆ ಎಂದರು.

ಒಂದು ವೇಳೆ ಪರಿಹಾರ ನೀಡಲು ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಜುಲೈ 10ರಿಂದ ರಾಜ್ಯದಾದ್ಯಂತ 42 ಸಾವಿರ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆಯ ಎಲ್ಲಾ ಕೆಲಸವನ್ನು ಸ್ಥಗಿತಗೊಳಿಸಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಸಮಿತಿಯ ರಾಜ್ಯ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ, ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ, ಸಂಚಾಲಕ ತಿಪ್ಪೇಸ್ವಾಮಿ ಅಣಬೇರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT