ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಗಳೂರಿನಲ್ಲಿ ಬೈಕ್ ಅಪಘಾತ: ಆರೋಪಿ ಪತ್ತೆಗಾಗಿ ಹೊರಟಿದ್ದ ಎಎಸ್ಐ ಸಾವು

ಕಾಳಾಪುರದ ಗಲಭೆ ಪ್ರಕರಣ
Last Updated 4 ಫೆಬ್ರುವರಿ 2023, 15:18 IST
ಅಕ್ಷರ ಗಾತ್ರ

ಜಗಳೂರು (ದಾವಣಗೆರೆ ಜಿಲ್ಲೆ): ಕೊಟ್ಟೂರು ಸಮೀಪ ಕಾಳಾಪುರ ಗ್ರಾಮದಲ್ಲಿ ಈಚೆಗೆ ನಡೆದ ಗಲಭೆ ಪ್ರಕರಣದ ಆರೋಪಿಗಳನ್ನು ಪತ್ತೆ ಮಾಡಲು ತೆರಳುತ್ತಿದ್ದ ವಿಜಯನಗರ ಜಿಲ್ಲೆಯ ಹಂಪಿ ಪೊಲೀಸ್‌ ಠಾಣೆಯ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಶಬ್ಬೀರ್ ಹುಸೇನ್ (59) ಅವರು ಪಟ್ಟಣದ ಹೊರವಲಯದ ಚಳ್ಳಕೆರೆ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಬೈಕ್‌ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಕೊಟ್ಟೂರಿನಲ್ಲಿ ಹಮ್ಮಿಕೊಂಡಿದ್ದ ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಸಿರಿಗೆರೆಯ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರನ್ನು ಬೈಕ್‌ ರ‍್ಯಾಲಿಯಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಕಾಳಾಪುರ ಗ್ರಾಮದಲ್ಲಿ ವಿವಿಧ ಸಮುದಾಯಗಳ ಮಧ್ಯೆ ಗುಂಪು ಘರ್ಷಣೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಪತ್ತೆಗಾಗಿ ಜಗಳೂರು ತಾಲ್ಲೂಕಿನ ವಿವಿಧ ಹಳ್ಳಿಗಳಿಗೆ ತೆರಳುತ್ತಿದ್ದ ಎಸ್.ಎಸ್.ಐ ಶಬ್ಬೀರ್ ಹುಸೇನ್ ಅವರು ಬೆಳಿಗ್ಗೆ ಚಳ್ಳಕೆರೆ ರಸ್ತೆಯ ಗವಿಸ್ವಾಮಿ ಮಠದ ಹತ್ತಿರ ಬೈಕ್‌ನಲ್ಲಿ ಹೋಗುತ್ತಿದ್ದರು. ಜೋಗ ಜಲಪಾತಕ್ಕೆ ಹೊರಟಿದ್ದ ಬಳ್ಳಾರಿ ನಗರದ ರೋಹನ್ ಅವರು ಮುಂದಿನ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಎದುರಿಗೆ ಬರುತ್ತಿದ್ದ ಎಎಸ್ಐ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಶಬ್ಬೀರ್ ಹುಸೇನ್ ತಲೆಗೆ ತೀವ್ರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೈ ಮುರಿದಿದ್ದು, ಮುಖಕ್ಕೆ ತೀವ್ರವಾಗಿ ಗಾಯಗೊಂಡ ರೋಹನ್ ಅವರನ್ನು ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಗಳೂರು ಠಾಣೆ ಇನ್‌ಸ್ಪೆಕ್ಟರ್ ಶ್ರೀನಿವಾಸ್ ಹಾಗೂ ಹಂಪಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ಶಿವರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT