ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೊನ್ನಾಳಿ ಪುರಸಭೆ: ಆಸ್ತಿ ತೆರಿಗೆ ಪಾವತಿ ದಿನಾಂಕ ವಿಸ್ತರಣೆ 

Published 9 ಜುಲೈ 2024, 14:21 IST
Last Updated 9 ಜುಲೈ 2024, 14:21 IST
ಅಕ್ಷರ ಗಾತ್ರ

ಹೊನ್ನಾಳಿ: ಪುರಸಭೆ ವ್ಯಾಪ್ತಿಯಲ್ಲಿ ಬರುವ ಆಸ್ತಿ ತೆರಿಗೆದಾರರಿಗೆ ಇದ್ದ ಶೇ 5 ರಿಯಾಯಿತಿ ಸೌಲಭ್ಯವನ್ನು ಜುಲೈ 31ರವರೆಗೆ ವಿಸ್ತರಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪುರಸಭೆ ಆಡಳಿತಾಧಿಕಾರಿ ಹಾಗೂ ಕಂದಾಯ ಉಪವಿಭಾಗಾಧಿಕಾರಿ ವಿ. ಅಭಿಷೇಕ್ ಹಾಗೂ ಮುಖ್ಯಾಧಿಕಾರಿ ಲೀಲಾವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಈ ಸೌಲಭ್ಯವನ್ನು ಕಳೆದ ಏಪ್ರಿಲ್ 30ರವರೆಗೆ ನೀಡಲಾಗಿತ್ತು. ಇದೀಗ ಸರ್ಕಾರದ ಸುತ್ತೋಲೆ ಪ್ರಕಾರ ಜುಲೈ 31ರವರೆಗೆ ವಿಸ್ತರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT