ಪಾಂಡವಪುರ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ದಲಿತರ ಮೇಲಿನ ದೌರ್ಜನ್ಯ ಹೆಚ್ಚಳವಾಗಿವೆ ಎಂದು ಮಾಜಿ ಶಾಸಕ ಕೆ.ಅನ್ನದಾನಿ ಆರೋಪಿಸಿದರು.
ತಾಲ್ಲೂಕಿನ ಕೆಂಚನಹಳ್ಳಿ ಗ್ರಾಮದಲ್ಲಿ ಹಲ್ಲೆಗೊಳಗಾಗಿದ್ದ ಪರಿಶಿಷ್ಟ ಜಾತಿಯವರನ್ನು ಭೇಟಿ ಮಾಡಿ ಅವರು ಮಾತನಾಡಿದರು.
‘ದಲಿತರನ್ನು ಮತ ಬ್ಯಾಂಕ್ ಮಾಡಿಕೊಂಡಿರುವ ಕಾಂಗ್ರೆಸ್ ದಲಿತರಿಗೆ ರಕ್ಷಣೆ ನೀಡುತ್ತಿಲ್ಲ. ಯಾವ ಪುರುಷಾರ್ಥಕ್ಕೆ ದಲಿತರು ಕಾಂಗ್ರೆಸ್‌ಗೆ ಮತ ಹಾಕಿದರು. ಮುಖ್ಯಮಂತ್ರಿ ಮತ್ತು ಉಪ ಉಪಮುಖ್ಯಮಂತ್ರಿಗಳು ದಲಿತರಿಗೆ ರಕ್ಷಣೆ ನೀಡಲು ಮುಂದಾಗಬೇಕು’ ಎಂದು ಆಗ್ರಹಿಸಿದರು.
‘ಗ್ರಾಮದಲ್ಲಿ ದಲಿತರು ಹಾಗೂ ದಲಿತೇತರರು ಸಹೋದರಂತೆ ಬಾಳ್ವೆ ನಡೆಸುತ್ತಿದ್ದಾರೆ. ಚಲುವೇಗೌಡ ಹಾಗೂ ಶಂಕರ ಅವರ ಕುಟುಂಬಗಳ ನಡುವೆ ಜಮೀನಿನ ಸಂಬಂಧ ಘರ್ಷಣೆಯಾಗಿದೆ. ಕೂಡಲೇ ಸರ್ಕಾರ ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು’ ಎಂದು ಒತ್ತಾಯಿಸಿದರು.
ಜೆಡಿಎಸ್ ಎಸ್ಸಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಿರಣ್‌ಕುಮಾರ್, ಜಿಲ್ಲಾ ಘಟಕದ ಅಧ್ಯಕ್ಷ ಜಯರಾಮ್, ಮುಖಂಡರಾದ ಭದ್ರಮೂರ್ತಿ, ಮುನಿರಾಜು, ಅಲ್ಪಹಳ್ಳಿ ಗೋವಿಂದಯ್ಯ, ಕನಗನಮರಡಿ ಬೊಮ್ಮರಾಜು, ಚಲುವ, ಪ್ರಶಾಂತ್, ಕೆಂಚನಹಳ್ಳಿ ಕೃಷ್ಣಮೂರ್ತಿ, ಸಣಬ ಜಯಲಕ್ಷ್ಮಿ ಇದ್ದರು.