ಹೊನ್ನಾಳಿ: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಇರುವ ಎರಡುಖಾಸಗಿ ಕ್ಲಿನಿಕ್‌ಗಳಿಗೆ ಭೇಟಿ ನೀಡಿದ ತಹಶೀಲ್ದಾರ್ ಆಸ್ಪತ್ರೆ ನಡೆಸಲು ಅಗತ್ಯವಿದ್ದ ದಾಖಲೆಗಳನ್ನು ಒದಗಿಸದಿದ್ದರಿಂದ ಕ್ಲಿನಿಕ್‌ಗಳಿಗೆ ಗುರುವಾರ ಬೀಗ ಹಾಕಿಸಿದರು.

‘ಹೊನ್ನಾಳಿ ತಾಲ್ಲೂಕಿನಾದ್ಯಂತ ಖಾಸಗಿ ಕ್ಲಿನಿಕ್‌ಗಳಿಗೆ ಭೇಟಿ ನೀಡಿದ್ದು, ದಾಖಲೆಗಳನ್ನು ಪರಿಶೀಲಿಸುವ ಕಾರ್ಯ ನಡೆಸುತ್ತಿದ್ದೇವೆ. ಈ ವೇಳೆ ಕೆಲವು ಖಾಸಗಿ ಕ್ಲಿನಿಕ್‍ಗಳಲ್ಲಿ ದಾಖಲೆಗಳನ್ನು ಪರಿಶೀಲಿಸಿದಾಗ ಪರವಾನಗಿ ಅವಧಿ ಮುಕ್ತಾಯವಾಗಿದೆ. ಅಂತಹ ಕ್ಲಿನಿಕ್‍ಗಳನ್ನು ಬಂದ್ ಮಾಡಿಸಿದ್ದೇವೆ. ಅಂತಹ ಕ್ಲಿನಿಕ್‍ಗಳಿಗೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಕೆಂಚಪ್ಪ ಅವರ ಮೂಲಕ ನೋಟಿಸ್ ಜಾರಿ ಮಾಡಿಸಲಾಗುವುದು’ ಎಂದುತಹಶೀಲ್ದಾರ್ ಬಸನಗೌಡ ಕೋಟೂರ ಹೇಳಿದರು.

ಹೊನ್ನಾಳಿಯಲ್ಲಿರುವ ಈ ಖಾಸಗಿ ಕ್ಲಿನಿಕ್‌ಗಳಿಗೆ ಪುರಸಭೆಯಿಂದ ನೋಟಿಸ್ ಜಾರಿ ಮಾಡಿ ವಿವರಣೆ ಪಡೆಯಲಾಗುವುದು. ಸಮರ್ಪಕ ದಾಖಲೆಗಳನ್ನು ಸಲ್ಲಿಸದಿದ್ದರೆ ಸಂಬಂಧಪಟ್ಟ ಖಾಸಗಿ ವೈದ್ಯರ ಮೇಲೆ ದೂರು ದಾಖಲಿಸಲಾಗುವುದು ಎಂದು ತಿಳಿಸಿದರು.

ಶೀತ, ಕೆಮ್ಮು ಹಾಗೂ ಜ್ವರ ಬಂದರೆ ಜನರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ಸುಮ್ಮನಿದ್ದು ಬಿಡುತ್ತಾರೆ. ಹಾಗೆ ಮಾಡದೆ ಕೊರೊನಾ ಪರೀಕ್ಷೆ ಮಾಡಿಸಬೇಕು ಎಂದು ಸಲಹೆ ನೀಡಿದರು.

ಪಿಎಸ್‍ಐ ಬಸವನಗೌಡ ಬಿರಾದರ್, ಪುರಸಭೆಯ ಮುಖ್ಯಾಧಿಕಾರಿ ಅಶೋಕ್, ಪೊಲೀಸ್ ಸಿಬ್ಬಂದಿ ವೆಂಕಟೇಶ್, ನಾಗರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.