ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

55 ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಶಿಫಾರಸು: ಮಾಡಾಳ್

ಚನ್ನಗಿರಿ ಪ್ರವಾಸಿ ಮಂದಿರದಲ್ಲಿ ಬಗರ್‌ಹುಕುಂ ಸಮಿತಿ ಸಭೆ
Last Updated 1 ಜುಲೈ 2022, 2:22 IST
ಅಕ್ಷರ ಗಾತ್ರ

ಚನ್ನಗಿರಿ: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಅರಣ್ಯ ಹಾಗೂ ಸರ್ಕಾರಿ ಗೋಮಾಳದಲ್ಲಿ ಸಾಗುವಳಿ ಮಾಡಿಕೊಂಡಿದ್ದ 55 ಮಂದಿಗೆ ಹಕ್ಕುಪತ್ರ ನೀಡುವಂತೆ ಜಿಲ್ಲಾಧಿಕಾರಿ ಅವರಿಗೆ ಬಗರ್‌ಹುಕುಂ ಸಮಿತಿ ಶಿಫಾರಸು ಮಾಡಿದೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಆಡಳಿತದಿಂದ ಗುರುವಾರ ನಡೆದ ಬಗರ್‌ಹುಕುಂ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಗರ್‌ಹುಕುಂ ಸಾಗುವಳಿದಾರರಿಗೆ ಅನ್ಯಾಯವಾಗಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ನಮೂನೆ 53 ಹಾಗೂ 57ರಡಿ ಇದುವರೆಗೆ ಅರ್ಜಿ ಹಾಕದೇ ಇರುವ ಸಾಗುವಳಿದಾರರು ಅರ್ಜಿ ಸಲ್ಲಿಸಲು ಮತ್ತೆ 1 ವರ್ಷ ಕಾಲಾವಕಾಶ ನೀಡಿದ್ದು, ಅರ್ಜಿ ಹಾಕದಿರುವ ಸಾಗುವಳಿ
ದಾರರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದರು ಮಾವಿನಕಟ್ಟೆ ವಲಯ ಅರಣ್ಯಾಧಿಕಾರಿ ಜಿತೇಂದ್ರ, ಚನ್ನಗಿರಿ ವಲಯ ಅರಣ್ಯಾಧಿಕಾರಿ ಸತೀಶ್, ಬಗರ್‌ಹುಕುಂ ಸಮಿತಿ ಸದಸ್ಯರಾದ ರಾಜೇಶ್ ನೆಲ್ಲಿಹಂಕಲು, ಕೆ.ಸಿ. ಕೆಂಚಪ್ಪ, ಉಮಾ ರಾಜಪ್ಪ, ಶಿರಸ್ತೇದಾರ್ ಮೋಹನ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಯು.ಬಿ. ಉಮೇಶ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT