ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬೇಡಜಂಗಮ ಸಮಾಜದಿಂದ 30ರಂದು ಬೆಂಗಳೂರು ಚಲೋ’

Last Updated 23 ಜೂನ್ 2022, 2:09 IST
ಅಕ್ಷರ ಗಾತ್ರ

ಹೊನ್ನಾಳಿ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಖಿಲ ಕರ್ನಾಟಕ ಬೇಡಜಂಗಮ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಿ.ಡಿ. ಹಿರೇಮಠ ಅವರ ನೇತೃತ್ವದಲ್ಲಿ ಬೇಡಜಂಗಮ ಸತ್ಯಪ್ರತಿಪಾದನಾ ಸತ್ಯಾಗ್ರಹ, ಬೆಂಗಳೂರು ಚಲೋ ಹಾಗೂ ಜೈಲ್ ಭರೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಬೇಡಜಂಗಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪರಮೇಶ್ವರಯ್ಯ ಹೇಳಿದರು.

‘20 ಶಾಸಕರು ಬೇಡಜಂಗಮರ ಹಕ್ಕುಗಳನ್ನು ಮೊಟಕುಗೊಳಿಸಲು ಮತ್ತು ಅಸ್ತಿತ್ವ ನಾಶಮಾಡಲು ಪ್ರಯತ್ನಿಸಿದ್ದರು. ಈ ಕಾರಣ ಬೇಡಜಂಗಮ ಸಮಾಜಕ್ಕೆ ಸಂವಿಧಾನದ ಅಡಿಯಲ್ಲಿ ಸಿಕ್ಕಿರುವ ಅವಕಾಶವನ್ನು ಉಳಿಸಿಕೊಳ್ಳಲು, ಪರಿಶಿಷ್ಟ ಜಾತಿಯ ಹಕ್ಕನ್ನು ಕಾನೂನುಬದ್ಧವಾಗಿ ದೊರಕಿಸಿಕೊಡಲು ಹೋರಾಟ ಹಮ್ಮಿಕೊಳ್ಳಲಾಗಿದೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದೇ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ.ವೀರಶೈವ ಜಂಗಮರು, ಬೇಡಜಂಗಮರು ಬೇರೆ ಬೇರೆ ಎನ್ನುವ ಗೊಂದಲನಿವಾರಣೆಗೆ ಮತ್ತು ಹಕ್ಕುಗಳ ಪ್ರತಿಪಾದನೆಗಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಒಕ್ಕೂಟದ ಸಂಘಟನೆಗಳ ಒಪ್ಪಿಗೆ ಮೇರೆಗೆ ರಾಜ್ಯದ ಎಲ್ಲಾ ಮಠಾಧೀಶರ ಸಮ್ಮುಖ
ದಲ್ಲಿ ಜೈಲ್ ಭರೋ ಹಮ್ಮಿಕೊಳ್ಳಲಾಗಿದೆ. ಹೊನ್ನಾಳಿ–ನ್ಯಾಮತಿ ತಾಲ್ಲೂಕಿನ ಬೇಡಜಂಗಮರು ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.

ಬೇಡಜಂಗಮ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಗುರುಪಾದಯ್ಯ ಮಠದ್, ಸಂಘಟನಾ ಕಾರ್ಯದರ್ಶಿ ಕೆ. ದಯಾನಂದಸ್ವಾಮಿ, ರುದ್ರಸ್ವಾಮಿ ಕುಳಗಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT