ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ಯ ವಿವಾಹಕ್ಕೆ ತಡೆ

Last Updated 3 ಮೇ 2021, 3:07 IST
ಅಕ್ಷರ ಗಾತ್ರ

ದಾವಣಗೆರೆ: ಮಾಯಕೊಂಡ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದಿದ್ದಾರೆ. ಬಾಲಕಿಯನ್ನು ಬಾಲಮಂದಿರಕ್ಕೆ ದಾಖಲಿಸಿದ್ದಾರೆ.

18 ವರ್ಷದ ತುಂಬದ ಬಾಲಕಿಗೆ ಮದುವೆ ನಡೆಯಲಿದೆ ಎಂಬ ಮಾಹಿತಿ ಮಕ್ಕಳ ಸಹಾಯವಾಣಿಗೆ ಬಂದಿತ್ತು. ಅದರ ಆಧಾರದಲ್ಲಿ ವಾಣಿ ಕೊಲ್ಯಾಬ್ ಡಾನ್ ಬಾಸ್ಕೋ ತಂಡದ ಸಂಯೋಜಕ ಟಿ.ಎಂ.ಕೊಟ್ರೇಶ, ಕುರ್ಕಿ ಗ್ರಾಮ ಪಂಚಾಯಿತಿ ಪಿಡಿಒ ಸುರೇಖಾ, ಶಿಶು ಅಭಿವೃದ್ಧಿ ಯೋಜನೆ ಹಿರಿಯ ಮೇಲ್ವಿಚಾರಕಿ ಮೈತ್ರಾದೇವಿ, ಮೇಲ್ವಿಚಾರಕಿ ಕೆ.ಸಿ. ಪ್ರಮೀಳಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಮತಾ, ಮಾಯಕೊಂಡ ಠಾಣೆ ಎಎಸ್‍ಐ ಮೂರ್ತಿ, ಕಾನ್‌ಸ್ಟೆಬಲ್ ಟಿ. ತಿಮ್ಮಪ್ಪ, ಚಾಲಕ ಮಾರುತಿ ಅವರನ್ನು ಒಳಗೊಂಡ ತಂಡ ಭಾನುವಾರ ಭೇಟಿ ನೀಡಿತ್ತು.

ಬಾಲಕಿಯ ಶಾಲಾ ದಾಖಲಾತಿ ಸಂಗ್ರಹಿಸಿ, ಪರಿಶೀಲಿಸಿದಾಗ ವಯಸ್ಸು 16 ವರ್ಷ 11 ತಿಂಗಳಾಗಿರುವುದು ಕಂಡು ಬಂದಿತು. ಬಾಲ್ಯ ವಿವಾಹ ನಿಷೇಧ ಕಾಯ್ದೆ ಪ್ರಕಾರ ಬಾಲ್ಯ ವಿವಾಹ ಮಾಡಿದರೆ 1 ವರ್ಷಕ್ಕೆ ಕಡಿಮೆ ಇಲ್ಲದಂತೆ ಜೈಲು ಶಿಕ್ಷೆ, ₹ 1 ಲಕ್ಷ ದಂಡ ಇರುವುದನ್ನು ತಿಳಿಸಲಾಯಿತು. ವರನ ತಾಯಿಯ ಅನಾರೋಗ್ಯದ ಕಾರಣದಿಂದ ಬೇಗ ಮದುವೆ ಮಾಡಬೇಕಾಗಿದೆ ಎಂದು ವಧುವಿನ ಕಡೆಯವರು ಪಟ್ಟು ಹಿಡಿದರು. ಹಾಗಾಗಿ ಬಾಲಕಿಯನ್ನು ವಶಕ್ಕೆ ಪಡೆದು ದಾವಣಗೆರೆಯ ಬಾಲಕಿಯರ ಬಾಲಮಂದಿರಕ್ಕೆ ದಾಖಲಿಸಿ ಬಾಲ್ಯ ವಿವಾಹವನ್ನು ತಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT